Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಷಿಪಣಿ ದಾಳಿಯಿಂದ ಅತ್ಯಂತ ಗಂಭೀರ...

ಕ್ಷಿಪಣಿ ದಾಳಿಯಿಂದ ಅತ್ಯಂತ ಗಂಭೀರ ಪರಿಣಾಮ : ಅಮೆರಿಕಕ್ಕೆ ರಶ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ8 April 2017 8:27 PM IST
share
  • ಕ್ಷಿಪಣಿ ದಾಳಿಯಿಂದ ಅತ್ಯಂತ ಗಂಭೀರ ಪರಿಣಾಮ : ಅಮೆರಿಕಕ್ಕೆ ರಶ್ಯ ಎಚ್ಚರಿಕೆ
  • ಕ್ಷಿಪಣಿ ದಾಳಿಯಿಂದ ಅತ್ಯಂತ ಗಂಭೀರ ಪರಿಣಾಮ : ಅಮೆರಿಕಕ್ಕೆ ರಶ್ಯ ಎಚ್ಚರಿಕೆ

ಮಾಸ್ಕೊ, ಎ. 8: ಸಿರಿಯದ ವಾಯು ನೆಲೆಯ ಮೇಲೆ ಅಮೆರಿಕ ನಡೆಸಿದ ಕ್ಷಿಪಣಿ ದಾಳಿಯು ‘ಅತ್ಯಂತ ಗಂಭೀರ’ ಪರಿಣಾಮಗಳಿಗೆ ಕಾರಣವಾಗಬಹುದಾಗಿದೆ ಎಂದು ರಶ್ಯ ಶುಕ್ರವಾರ ಎಚ್ಚರಿಸಿದೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ವಿದೇಶಿ ಸಂಘರ್ಷವೊಂದರಲ್ಲಿ ನಡೆಸಿರುವ ಪ್ರಥಮ ಹಸ್ತಕ್ಷೇಪವು ರಶ್ಯ ಮತ್ತು ಅಮೆರಿಕಗಳ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಅಮೆರಿಕದ ಯುದ್ಧ ನೌಕೆಗಳಾದ ಯುಎಸ್‌ಎಸ್ ಪೋರ್ಟರ್ ಮತ್ತು ಯುಎಸ್‌ಎಸ್ ರಾಸ್ ಮೆಡಿಟರೇನಿಯನ್ ಸಮುದ್ರದಿಂದ ಶಾಯ್‌ರಾತ್ ವಾಯುನೆಲೆಯ ಮೇಲೆ ‘ಟಾಮ್‌ಹಾಕ್’ ಕ್ಷಿಪಣಿಗಳ ಸುರಿಮಳೆಗೈದಿದ್ದವು. ಸಿರಿಯದ ಈ ವಾಯುನೆಲೆಯಿಂದಲೇ ಸಿರಿಯದ ಸೇನೆ ಖಾನ್ ಶೇಖೂನ್ ಪಟ್ಟಣದಲ್ಲಿ ನಾಗರಿಕರ ಮೇಲೆ ರಾಸಾಯನಿಕ ದಾಳಿ ನಡೆಸಿತ್ತು ಎಂದು ಅಮೆರಿಕ ಆರೋಪಿಸಿದೆ.

ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸದ್ ಸರಕಾರ ತನ್ನದೇ ನಾಗರಿಕರ ಮೇಲೆ ರಾಸಾಯನಿಕ ಅಸ್ತ್ರಗಳನ್ನು ಪ್ರಯೋಗಿಸಿದ ಹಿನ್ನೆಲೆಯಲ್ಲಿ ತಾನು ಕ್ಷಿಪಣಿ ದಾಳಿ ನಡೆಸಬೇಕಾಯಿತು ಎಂದು ಅಮೆರಿಕ ಹೇಳಿದೆ.

ರಾಸಾಯನಿಕ ದಾಳಿಯಲ್ಲಿ 80ಕ್ಕೂ ಅಧಿಕ ಮಂದಿ ಪ್ರಾಣಕಳೆದುಕೊಂಡಿದ್ದಾರೆ.ದಾಳಿಯನ್ನು ತಾನು ನಡೆಸಿಲ್ಲ ಎಂದು ಸಿರಿಯ ಹೇಳಿಕೊಂಡಿದೆ.

‘‘ಅಮೆರಿಕದ ಕಾನೂನುಬಾಹಿರ ಕೃತ್ಯಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಸ್ಥಿರತೆಯ ಮೇಲೆ ಇದು ಬೀರುವ ಪರಿಣಾಮಗಳು ಅತ್ಯಂತ ಗಂಭೀರವಾಗಿರುತ್ತವೆ’’ ಎಂದು ವಿಶ್ವಸಂಸ್ಥೆಗೆ ರಶ್ಯದ ಉಪರಾಯಭಾರಿ ವ್ಲಾದಿಮಿರ್ ಸಫ್ರೊಂಕೊವ್ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಹೇಳಿದರು.

ಅಮೆರಿಕದ ದಾಳಿಗಳು ರಶ್ಯ ಸೇನೆಯೊಂದಿಗೆ ಸಂಘರ್ಷ ನಡೆಸುವುದರಿಂದ ಕೇವಲ ಒಂದು ಹೆಜ್ಜೆ ದೂರವಿತ್ತು ಎಂದು ರಶ್ಯದ ಪ್ರಧಾನಿ ಡಿಮಿಟ್ರಿ ಮೆಡ್ವೆಡೆವ್ ಆರೋಪಿಸಿದ್ದಾರೆ.

ಅಮೆರಿಕದ ಪಡೆಗಳು ಕ್ಷಿಪಣಿ ದಾಳಿಗೆ ಮುನ್ನ ರಶ್ಯಕ್ಕೆ ಮಾಹಿತಿ ನೀಡಿದ್ದವು. ಹಾಗಾಗಿ, ರಶ್ಯದ ಸೈನಿಕರೊಂದಿಗೆ ಅಮೆರಿಕ ಮುಖಾಮುಖಿಯಾಗುವುದು ತಪ್ಪಿತ್ತು.

ಇನ್ನೂ ಹೆಚ್ಚಿನ ಕ್ರಮಕ್ಕೆ ಸಿದ್ಧ: ಹೇಲಿ
ಸಿರಿಯದಲ್ಲಿ ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲು ಅಮೆರಿಕ ಸಿದ್ಧ ಎಂದು ವಿಶ್ವಸಂಸ್ಥೆಗೆ ಅಮೆರಿಕದ ರಾಯಭಾರಿ ನಿಕ್ಕಿ ಹೇಲಿ ಶುಕ್ರವಾರ ಹೇಳಿದ್ದಾರೆ.
‘‘ಇನ್ನೂ ಹೆಚ್ಚಿನ ಕ್ರಮಕ್ಕೆ ನಾವು ಸಿದ್ಧರಿದ್ದೇವೆ, ಆದರೆ, ಅದರ ಅಗತ್ಯ ಬೀಳುವುದಿಲ್ಲ ಎಂದು ನಾವು ಭಾವಿಸಿದ್ದೇವೆ’’ ಎಂದು ಅವರು ವಿಶ್ವಸಂಸ್ಥೆಯ ಭದ್ರತಾ ಸಮಿತಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X