ಕಾರು ಢಿಕ್ಕಿ: ಮಹಿಳೆ ಮೃತ್ಯು

ಕೋಟ, ಎ.8: ಮಣೂರು ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬೆಳಗ್ಗೆ 9:15ರ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೃತರನ್ನು ವನಜಾ ಶೆಟ್ಟಿ(65) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುವಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರು ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ವನಜಾ ಶೆಟ್ಟಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





