ಬಾಲಕಿಯ ಅತ್ಯಾಚಾರ: ಆರೋಪಿಗೆ ನ್ಯಾಯಾಂಗ ಬಂಧನ

ಉಡುಪಿ, ಎ.8: ಬಿದ್ಕಲ್‌ಕಟ್ಟೆಯ ಎಂಟರ ಹರೆಯದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಸ್ಥಳೀಯ ನಿವಾಸಿ ರಾಮದಾಸ್ ಪ್ರಭು(53) ಎಂಬಾತನನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅತ್ಯಾಚಾರಕ್ಕೊಳಗಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಬಾಲಕಿ ಚೇತರಿಸಿಕೊಂಡಿದ್ದು, ಇಂದು ಆಕೆಯನ್ನು ಆಸ್ಪತ್ರೆ ಯಿಂದ ಬಿಡುಗಡೆಗೊಳಿಸಲಾಗಿದೆ. ಈ ಬಗ್ಗೆ ಪೊಕ್ಸೊ ಕಾಯ್ದೆಯಡಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story





