ಪೊಲೀಸ್ ದೌರ್ಜನ್ಯ ಪ್ರಕರಣ: ಗೃಹ ಸಚಿವರಿಂದ ತನಿಖಾಧಿಕಾರಿ ನೇಮಕ: ಖಾದರ್

ಮಂಗಳೂರು, ಎ.8: ಖುರೇಶಿ ಮೇಲೆ ಪೊಲೀಸರು ನಡೆಸಿದ್ದಾರೆ ಎನ್ನಲಾದ ದೌರ್ಜನ್ಯದ ಕುರಿತ ತನಿಖೆಗೆ ತನಿಖಾಧಿಕಾರಿಯನ್ನು ನೇಮಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಇಂದು ಅಹ್ಮದ್ ಖುರೇಶಿ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವೈದ್ಯರೊಂದಿಗೆ ರೋಗಿಯ ಸ್ಥಿತಿಯ ಬಗ್ಗೆ ಸಮಾಲೋಚನೆ ನಡೆಸಿದ ಖಾದರ್ ನಂತರ ಮಾತನಾಡಿದರು.
ಪೊಲೀಸರು ಖುರೇಶಿ ಮೇಲೆ ನಡೆಸಿದ್ದಾರೆ ಎನ್ನಲಾದ ದೌರ್ಜನ್ಯದ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸಿದ್ದು, ಈ ಸಂದರ್ಭದಲ್ಲಿ ಅವರು ತನಿಖಾಧಿಕಾರಿಯನ್ನು ನೇಮಿಸುವುದಾಗಿ ತಿಳಿಸಿದ್ದಾರೆ ಎಂದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನ್.ಎಸ್.ಕರೀಂ, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಮುಸ್ತಫಾ ಪಾವೂರು, ರಿಯಾಝ್ ಬಂಟ್ವಾಳ, ರಫೀಕ್ ಮತ್ತು ಝಕರಿಯ್ಯಾ ಜೊತೆಗಿದ್ದರು.
Next Story





