ಉಡುಪಿ: 225 ಮಂದಿ ಗೈರು
ಎಸೆಸೆಲ್ಸಿ ಪರೀಕ್ಷೆ
ಉಡುಪಿ, ಎ.8: ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ನಡೆದ ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಗೆ ಒಟ್ಟು 225 ಮಂದಿ ಗೈರುಹಾಜರಾಗಿದ್ದರು. ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದ 15,169 ವಿದ್ಯಾರ್ಥಿಗಳಲ್ಲಿ 14,944 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಯಾವುದೇ ಕೇಂದ್ರದಲ್ಲಿ ಅವ್ಯವಹಾರಗಳು ವರದಿಯಾಗಿಲ್ಲ ಎಂದು ಡಿಡಿಪಿಐ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





