ಹೆದ್ದಾರಿಗೆ ಬಂದ ಕಡವೆ ಕಾರಿಗೆ ಢಿಕ್ಕಿಯಾಗಿ ಸಾವು, ಕಾರು ಜಖಂ

ಕಡಬ, ಎ.9: ಕಡವೆಯೊಂದು ಹಠಾತ್ ಆಗಿ ರಸ್ತೆಗೆ ನುಗ್ಗಿ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಕಾರಿನ ಒಂದು ಪಾರ್ಶ್ವ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಂಗಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಕಡವೆ ಹಠಾತ್ ಅಡ್ಡ ಬಂದು ಢಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಬಲಬದಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗೊಂಡ ಕಡವೆ ಸ್ಥಳದಲ್ಲಾ ಹಸುನೀಗಿದೆ.
ಸುಮಾರು ಆರು ತಿಂಗಳ ಹಿಂದೆಯೂ ಇದೇ ಸ್ಥಳದಲ್ಲಿ ಇದೇ ರೀತಿ ಕಡವೆಯೊಂದು ಕಾರಿಗೆ ಸಿಲುಕಿ ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಕಡಬ ಠಾಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





