ವಾಡಿ ಪುರಸಭೆ ಚುನಾವಣೆ: ಕಾಂಗ್ರೆಸ್ ಜಯಭೇರಿ

ಬೆಂಗಳೂರು, ಎ. 9: ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ವಾಡಿ ಪುರಸಭೆಯ 23 ವಾರ್ಡ್‌ಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ 13 ಸ್ಥಾನಗಳನ್ನು ಗಳಿಸುವ ಮೂಲಕ ಜಯಭೇರಿ ಭಾರಿಸಿದೆ.
ಬಿಜೆಪಿ 7 ಸ್ಥಾನಗಳನ್ನು ಗಳಿಸುವ ಮೂಲಕ ಎರಡನೆ ಸ್ಥಾನದಲ್ಲಿದ್ದು, ಮೂರು ಮಂದಿ ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದಾರೆ. ಎ.7ಕ್ಕೆ ಚುನಾವಣೆ ನಡೆದಿದ್ದು, ಎ.9ರಂದು ಮತ ಎಣಿಕೆ ಪೂರ್ಣಗೊಂಡ ನಂತರ ರಾಜ್ಯ ಚುನಾವಣಾ ಆಯೋಗ ಫಲಿತಾಂಶ ಪ್ರಕಟಿಸಿದೆ.
Next Story





