Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ ತಾಲೂಕಿನಾದ್ಯಂತ ಅನಿಯಮಿತ...

ಮೂಡಿಗೆರೆ ತಾಲೂಕಿನಾದ್ಯಂತ ಅನಿಯಮಿತ ಲೋಡ್‌ಶೆಡ್ಡಿಂಗ್: ಗ್ರಾಹಕರಿಂದ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 April 2017 10:44 PM IST
share
ಮೂಡಿಗೆರೆ ತಾಲೂಕಿನಾದ್ಯಂತ ಅನಿಯಮಿತ ಲೋಡ್‌ಶೆಡ್ಡಿಂಗ್: ಗ್ರಾಹಕರಿಂದ ಪ್ರತಿಭಟನೆಯ ಎಚ್ಚರಿಕೆ

ಮೂಡಿಗೆರೆ, ಎ.9: ತಾಲೂಕಿನ ಗೋಣಿಬೀಡು, ಮಾಕೋನಹಳ್ಳಿ, ದಾರದಹಳ್ಳಿ, ಬಣಕಲ್, ಕೊಟ್ಟಿಗೆಹಾರ, ಬಾಲೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಮೆಸ್ಕಾಂ ಅಧಿಕಾರಿಗಳು ಲೋಡ್‌ಶೆಡ್ಡಿಂಗ್ ನೆಪದಲ್ಲಿ ಗ್ರಾಮಸ್ಥರಿಗೆ ವಿದ್ಯುತ್ ನೀಡದೇ ವಂಚಿಸುತ್ತಿದ್ದಾರೆ ಎನ್ನುವ ಆರೋಪಗಳು ಗ್ರಾಹಕರಿಂದ ವ್ಯಕ್ತವಾಗಿದೆ.

ಮಳೆ ಬಂದರೆ ಲೈನ್ ಟ್ರಬಲ್ ನೆಪದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಪದೇ ಪದೇ ನಡೆಯುತ್ತದೆ. ವಿವಿಧೆಡೆ ವಿದ್ಯುತ್ ಇಲ್ಲದೇ ಜನರು ಪರದಾಡುತ್ತಿದ್ದರೆ, ಎಸೆಸೆಲ್ಸಿ ಮಕ್ಕಳು, ಹಾಸ್ಟೆಲ್ ವಿದ್ಯಾರ್ಥಿಗಳು ವಿದ್ಯುತ್ ಇಲ್ಲದೆ ಪರೀಕ್ಷೆಗೆ ಮೊಂಬತ್ತಿ ಹಚ್ಚಿಕೊಂಡು ಓದುವ ದೃಶ್ಯಗಳು ಸಾಮಾನ್ಯವಾಗಿವೆ. ಪ್ರತಿನಿತ್ಯ ಬೆಳಗ್ಗಿನಿಂದ ಮಧ್ಯಾಹ್ನದವೆರೆಗೆ ಅಥವಾ ಮಧ್ಯಾಹ್ನದಿಂದ ಸಂಜೆಯವರೆಗೆ ಲೋಡ್ ಶೆಡ್ಡಿಂಗ್ ನಡೆಯುತ್ತಿದೆಯಾದರೂ ಸಣ್ಣ ಮಟ್ಟಿನ ಮಳೆ ಬಂದರೂ, ಬಾರದಿದ್ದರೂ ವಿದ್ಯುತ್ ಕಣ್ಣಾಮುಚ್ಚಾಲೆ ತಪ್ಪಿದ್ದಲ್ಲ. ಕೆಲವೆಡೆ ರಾತ್ರಿಯಾದರೂ ವಿದ್ಯುತ್ ಬಾರದಿದ್ದಾಗ ಮೆಸ್ಕಾಂ ಕಚೇರಿಗೆ ಕರೆ ಮಾಡಿದರೆ, ಅಥವಾ ಹೋಗಿ ವಿಚಾರಿಸಿದವರಿಗೆ ಮೆಸ್ಕಾಂ ಕಚೇರಿಯಲ್ಲಿ ಸೌಜನ್ಯದ ಮಾತು ಬರುತ್ತಿಲ್ಲ ಎನ್ನುವ ಆರೋಪಗಳೂ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಬಣಕಲ್ ಗ್ರಾಪಂ ಅಧ್ಯಕ್ಷ ಬಿ.ವಿ. ಸುರೇಶ್ ಬಣಕಲ್ ಮೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಲೈನ್ ಟ್ರಬಲ್ ಇದೆ, ಸರಿಯಾಗುತ್ತೆ ಎನ್ನುವ ಉತ್ತರ ಬಂದಿದೆ. ರಾತ್ರಿ 10 ಗಂಟೆಗೆ ಬಂದ ವಿದ್ಯುತ್ ಕಣ್ಣಾಮುಚ್ಚಾಲೆಯಾಡಿ ಅರ್ಧ ಗಂಟೆ ಜನರಿಗೆ ದರ್ಶನ ಕೊಟ್ಟು ಮತ್ತೆ ಕೈಕೊಟ್ಟಿದೆ. ರವಿವಾರವೂ ಬೆಳಿಗ್ಗೆಯಿಂದಲೇ ವಿದ್ಯುತ್ ಕೈಕೊಟ್ಟಿದೆ. ಲೋಡ್ ಶೆಡ್ಡಿಂಗ್ ಇಲ್ಲ ಎಂದು ಸಚಿವರು ಹೇಳಿದ್ದರೂ ಬಣಕಲ್‌ನಲ್ಲಿ ವಿದ್ಯುತ್ ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಜನತೆ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X