Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಕೆಎಸ್ಸಾರ್ಟಿಸಿಗಿಲ್ಲ ಸಮರ್ಪಕ...

ಮಂಗಳೂರು ಕೆಎಸ್ಸಾರ್ಟಿಸಿಗಿಲ್ಲ ಸಮರ್ಪಕ ಸಿಸಿಟಿವಿ ಕ್ಯಾಮರಾ ಕಣ್ಗಾವಲು!

ಸತ್ಯಾ ಕೆ.ಸತ್ಯಾ ಕೆ.9 April 2017 11:58 PM IST
share
ಮಂಗಳೂರು ಕೆಎಸ್ಸಾರ್ಟಿಸಿಗಿಲ್ಲ ಸಮರ್ಪಕ ಸಿಸಿಟಿವಿ ಕ್ಯಾಮರಾ ಕಣ್ಗಾವಲು!

ಮಂಗಳೂರು, ಎ.9: ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ)ದ ಮಂಗಳೂರು ವಿಭಾಗದ ಪಾತ್ರ ಮಹತ್ತರವಾಗಿದೆ. 

ನಗರದೊಳಗೆ, ರಾಜ್ಯದೊಳಗೆ ಹಾಗೂ ಅಂತರ್ ರಾಜ್ಯ ಸಂಚಾರಕ್ಕ್ಕೂ ದಿನವೊಂದಕ್ಕೆ ಸರಾಸರಿ ಲಕ್ಷಗಟ್ಟಲೆ ಪ್ರಯಾಣಿಕರು ಮಂಗಳೂರು ಕೆಎಸ್ಸಾರ್ಟಿಸಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಹಾಗಿದ್ದಾಗ್ಯೂ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ರಾತ್ರಿ ಹಗಲೆನ್ನದೆ ಸಾರ್ವಜನಿಕರು ಸೇರುವ ಬಿಜೈನ ಪ್ರಮುಖ ಬಸ್ ನಿಲ್ದಾಣದಲ್ಲಿ ಸಮರ್ಪಕ ಸಿಸಿ ಕ್ಯಾಮರಾಗಳಿಲ್ಲ.

ಯಾವುದೇ ರೀತಿಯ ಅಹಿತಕರ ಘಟನೆಗಳು ಜನನಿಬಿಡ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡು ನಡೆಯುವ ಹಿನ್ನೆಲೆಯಲ್ಲಿ ದಿನವೊಂದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ಸರಕಾರಿ ಸ್ವಾಮ್ಯದ ಬಸ್ ನಿಲ್ದಾಣದಲ್ಲಿ ಭದ್ರತೆಯ ಕೊರತೆಯನ್ನು ಸರಳವಾಗಿ ಪರಿಗಣಿಸುವಂತಿಲ್ಲ. ಸುಮಾರು ಮೂರು ವರ್ಷಗಳ ಹಿಂದೆ ಬಸ್ ನಿಲ್ದಾಣದಲ್ಲಿ 4 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಆದರೆ, ಅವುಗಳಲ್ಲಿ ಪ್ರಸ್ತುತ 2 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಪ್ರಯಾಣಿಕರು ಬಸ್ ನಿಲ್ದಾಣದೊಳಗೆ ಬರುವಲ್ಲಿನ ಹಾಗೂ ಒಳಗಡೆಯ ಒಂದು ಸಿಸಿ ಕ್ಯಾಮರಾ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ಈ ಬಸ್ ನಿಲ್ದಾಣದಲ್ಲಿ ಎರಡು ಸಿಸಿ ಕ್ಯಾಮರಾಗಳ ಕಣ್ಗಾವಲು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸಲು ಅಸಾಧ್ಯ. ಅಷ್ಟು ಮಾತ್ರವಲ್ಲದೆ, ಬಸ್ ನಿಲ್ದಾಣದ ಹೊರ ಆವರಣದಲ್ಲಿ ಯಾವುದೇ ಸಿಸಿ ಕ್ಯಾಮರಾಗಳಿಲ್ಲ.

ಹೊರ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತದೆ. ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬಂದು ಹೋಗುತ್ತಿರುತ್ತಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಬೆಳಗ್ಗೆ 3:30ಕ್ಕೆ ಮಂಗಳೂರಿನಿಂದ ಮೈಸೂರಿಗೆ ಬಸ್ ಸಂಚಾರ ಆರಂಭಗೊಳ್ಳುತ್ತದೆ. ಬಳಿಕ ತಡರಾತ್ರಿಯವರೆಗೂ ಪ್ರಯಾಣಿಕರಿಂದ ಕೂಡಿದ ಬಸ್‌ಗಳು ಬಸ್ ನಿಲ್ದಾಣಕ್ಕೆ ಬಂದು ಹೋಗುತ್ತಿರುತ್ತವೆ. ವಿಮಾನ, ರೈಲು ಬಳಕೆಯಲ್ಲಿ ನಗರದ ಜನತೆ ಹೆಚ್ಚಿನ ಆಸಕ್ತಿ ತೋರಿಸಿರುವಂತೆಯೇ ಕೆಎಸ್ಸಾರ್ಟಿಸಿ ಬಗ್ಗೆಯೂ ವಿಶೇಷ ಒಲವಿದೆ. ಹಾಗಾಗಿಯೇ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಗೆ ದಿನಂಪ್ರತಿ 540 ಬಸ್‌ಗಳು ಸಂಚರಿಸುತ್ತಿವೆ. ಇವುಗಳಲ್ಲಿ ನಗರದಲ್ಲಿ ಪ್ರಸ್ತುತ ಸಂಚರಿಸುತ್ತಿರುವ 21 ನರ್ಮ್ ಬಸ್‌ಗಳು, 9 ನಗರ ಸಾರಿಗೆ ಬಸ್‌ಗಳ ಸೇರಿವೆ. ಅಲ್ಲದೆ, ಸಮೀಪದ ಕಾಸರಗೋಡು, ಪುಣೆ, ಮುಂಬೈ, ಹೈದರಾಬಾದ್, ಎರ್ನಾಕುಲಂ, ಕೊಯಮತ್ತೂರು, ಹಿಂದೂಪುರ, ತಿರುಪತಿ, ಚೆನ್ನೈ ಸೇರಿ 73 ಅಂತರ್ ರಾಜ್ಯ ಕೆಎಸ್ಸಾರ್ಟಿಸಿ ಬಸ್‌ಗಳು ಸಾರ್ವಜನಿಕರಿಗೆ ಪ್ರಯಾಣ ಸೌಲಭ್ಯವನ್ನು ಒದಗಿಸುತ್ತಿವೆ.

‘‘ಕಳೆದ ಫೆಬ್ರವರಿಯಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ದಿನವೊಂದಕ್ಕೆ ಸರಾಸರಿ 1 ಲಕ್ಷದಂತೆ ಒಟ್ಟು 28 ಲಕ್ಷ ಪ್ರಯಾಣಿಕರು ವಿವಿಧ ಪ್ರದೇಶಗಳಿಗೆ ಸಂಚಾರ ಬೆಳೆಸಿದ್ದಾರೆ. ಶಾಲಾ ರಜಾ ಸಮಯ ಹಾಗೂ ಹಬ್ಬ ಹರಿದಿನಗಳ ಸಂದರ್ಭ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ’’ ಎನ್ನುತ್ತಾರೆ ಕೆಎಸ್ಸಾರ್ಟಿಸಿಯ ಮಂಗಳೂರು ವಿಭಾಗೀಯ ಸಂಚಾಲನಾಧಿಕಾರಿ ಜಯಶಾಂತ್.

ವಿಶೇಷವೆಂದರೆ, ಕೆಎಸ್ಸಾರ್ಟಿಸಿಯ ಮೂಲಕ ನರ್ಮ್ ಯೋಜನೆಯಡಿ ಮಂಗಳೂರು ನಗರಕ್ಕೆ ಮಂಜೂರಾಗಿರುವ 21 ಬಸ್‌ಗಳಲ್ಲಿಯೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.ಆದರೆ, ಬಸ್ ನಿಲ್ದಾಣದ ಭದ್ರತೆ ಬಗ್ಗೆ ಮಾತ್ರ ಕೆಎಸ್ಸಾರ್ಟಿಸಿಯ ರಾಜ್ಯ ಘಟಕ ಹೆಚ್ಚಿನ ಆಸಕ್ತಿ ತೋರಿಸಿದಂತಿಲ್ಲ. ಹಾಗಾಗಿ ಈಗಾಗಲೇ ಅಳವಡಿಸಿರುವ ನಾಲ್ಕು ಸಿಸಿಟಿವಿ ಕ್ಯಾಮರಾಗಳಲ್ಲಿ ಎರಡು ಕ್ಯಾಮರಾಗಳು ಸ್ಥಗಿತವಾಗಿದ್ದರೂ ಅದಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಿಲ್ಲ, ರಿಪೇರಿ ಮಾಡುವ ಗೊಡವೆಗೂ ಹೋಗಿಲ್ಲ.

ಮಂಗಳೂರಿನಲ್ಲಿ ಖಾಸಗಿ ಬಸ್‌ಗಳ ತೀವ್ರ ಪೈಪೋಟಿಯ ನಡುವೆಯೂ ಸಾರ್ವಜನಿಕರಿಂದ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಪ್ರಯಾಣದ ಬಗ್ಗೆ ಆಸಕ್ತಿ ಕಡಿಮೆಯಾಗಿಲ್ಲ. ಸಾರ್ವಜನಿಕರು ಕೂಡಾ ನಿರಾಳವಾಗಿ ಯಾವುದೇ ಆತಂಕವಿಲ್ಲದೆ ಕೆಎಸ್ಸಾರ್ಟಿಸಿ ಬಸ್‌ಗಳ ಪ್ರಯಾಣಕ್ಕೆ ಇನ್ನಷ್ಟು ಒತ್ತು ನೀಡುವ ನಿಟ್ಟಿನಲ್ಲಿ ಬಸ್ ನಿಲ್ದಾಣದ ಭದ್ರತೆಯನ್ನೂ ಸಮರ್ಪಕ ಗೊಳಿಸಬೇಕಿದೆ.

ಹೊಸ ಸಿಸಿ ಕ್ಯಾಮರಾ ಅಳವಡಿಕೆ ಪ್ರಕ್ರಿಯೆಯಲ್ಲಿದೆ: ವಿವೇಕ್ ಹೆಗಡೆ

‘‘ಕಳೆದ ಸುಮಾರು ಮೂರು ವರ್ಷಗಳ ಹಿಂದೆ ಅಳವಡಿಸಲಾಗಿದ್ದ ನಾಲ್ಕು ಸಿಸಿ ಕ್ಯಾಮರಾಗಳಲ್ಲಿ ಎರಡು ಸುಮಾರು ನಾಲ್ಕು ತಿಂಗಳಿನಿಂದ ಕೆಟ್ಟು ಹೋಗಿವೆ. ಅದನ್ನು ರಿಪೇರಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ನಡುವೆ ರಾಜ್ಯ ಮಟ್ಟದಲ್ಲಿ ಎಲ್ಲಾ ಬಸ್ ನಿಲ್ದಾಣಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ ಕುರಿತಂತೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಮೂರ್ನಾಲ್ಕು ತಿಂಗಳಲ್ಲಿ ಮಂಗಳೂರು ಬಸ್ ನಿಲ್ದಾಣಕ್ಕೂ ಸುಮಾರು ಆರು ಹೊಸ ಸಿಸಿ ಕ್ಯಾಮರಾಗಳು ಅಳವಡಿಕೆಯಾಗಲಿವೆ. ಸದ್ಯ ಪ್ರಕ್ರಿಯೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನಡೆಯುತ್ತಿದೆ’’ ಎನ್ನುತ್ತಾರೆ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗ್ಡೆ.

share
ಸತ್ಯಾ ಕೆ.
ಸತ್ಯಾ ಕೆ.
Next Story
X