Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶದ ಬಳಿಕ ಈಗ ರಾಜಸ್ಥಾನದಲ್ಲೂ...

ಮಧ್ಯಪ್ರದೇಶದ ಬಳಿಕ ಈಗ ರಾಜಸ್ಥಾನದಲ್ಲೂ ಬಿಜೆಪಿಗೇ ಮತಹಾಕುವ ಮತಯಂತ್ರ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ10 April 2017 9:21 AM IST
share
ಮಧ್ಯಪ್ರದೇಶದ ಬಳಿಕ ಈಗ ರಾಜಸ್ಥಾನದಲ್ಲೂ ಬಿಜೆಪಿಗೇ ಮತಹಾಕುವ ಮತಯಂತ್ರ ಪತ್ತೆ!

ಹೊಸದಿಲ್ಲಿ, ಎ.10: ಯಾವ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಬೀಳುವ ಬಗ್ಗೆ ಆರೋಪಗಳಿರುವಂತೆಯೇ ಇತ್ತೀಚೆಗೆ ನಡೆದ ಚುನಾವಣೆಯೊಂದರಲ್ಲೂ ಬಿಜೆಪಿಗೆ ಅಕ್ರಮವಾಗಿ ಮತಗಳು ಬಿದ್ದಿರುವ ಬಗ್ಗೆ  ವರದಿಯಾಗಿದೆ. ಆದರೆ ಈ ಬಾರಿ ಮತಗಳಲ್ಲಿ ಅಕ್ರಮ ನಡೆದಿರುವುದು ಮಧ್ಯಪ್ರದೇಶದಲ್ಲಲ್ಲ. ಬದಲಾಗಿ, ರಾಜಸ್ಥಾನದಲ್ಲಿ. ರವಿವಾರವಷ್ಟೇ ನಡೆದ ಧೋಲ್ಪುರ್ ಉಪಚುನಾವಣೆಯಲ್ಲೂ ಇದೇ ರೀತಿಯ ಮತಯಂತ್ರ ಅಕ್ರಮ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೋಷಯುಕ್ತ ವಿದ್ಯುನ್ಮಾನ ಮತಯಂತ್ರಗಳು ಏಕೆ ಮತ್ತೆ ಮತ್ತೆ ಬಿಜೆಪಿ ಪರವಾಗಿಯೇ ಮತ ಚಲಾವಣೆ ಮಾಡುತ್ತವೆ ಎಂದು ಪ್ರಶ್ನಿಸಿದ್ದಾರೆ.

ಆಜ್‌ತಕ್ ಸುದ್ದಿವಾಹಿನಿಯ ವರದಿಯನ್ನು ಉಲ್ಲೇಖಿಸಿ ಮಾತನಾಡಿರುವ ಅವರು, "ದೋಷಯುಕ್ತ ಮತಯಂತ್ರಗಳು ಏಕೆ ಬಿಜೆಪಿಗೇ ಮತ ಚಲಾಯಿಸುತ್ತವೆ" ಎಂದು ಪ್ರಶ್ನಿಸಿದ್ದಾರೆ. 

"ಮತಯಂತ್ರಗಳು ದೋಷಯುಕ್ತವಲ್ಲ. ಅದರ ಸಾಫ್ಟ್‌ವೇರ್ ಬದಲಾಯಿಸಲಾಗಿದೆ. ಚುನಾವಣಾ ಆಯೋಗ ಒಂದು ಇವಿಎಂ ನೀಡಲಿ. ಅದನ್ನು ತಿದ್ದಲಾಗಿದೆ ಎನ್ನುವುದನ್ನು ನಾವು ಸಾಬೀತುಪಡಿಸುತ್ತೇವೆ" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. "ಎಂಸಿಡಿ ಚುನಾವಣೆಗಳು ತಟಸ್ಥವಾಗಿರುತ್ತವೆಯೇ? ಈ ಯಂತ್ರಗಳನ್ನು ಚುನಾವಣಾ ಆಯೋಗ ಏಕೆ ಪರಿಶೀಲಿಸಿ ತನಿಖೆ ನಡೆಸುತ್ತಿಲ್ಲ? ಇಂಥ ಸ್ಥಿತಿಯಲ್ಲಿ ಚುನಾವಣೆ ನಡೆಸುವ ಅಗತ್ಯತೆ ಏನು" ಎಂದು ಪ್ರಶ್ನಿಸಿದ್ದಾರೆ.

"ನಾನು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದೇನೆ. ಆದರೆ ವಿವಿಪಿಎಟಿ ಯಂತ್ರದಿಂದ ಬಂದ ಪ್ರಿಂಟ್‌ಔಟ್‌ನಲ್ಲಿ ಮತ ಬಿಜೆಪಿಗೆ ಹೋಗಿರುವುದು ದಾಖಲಾಗಿದೆ" ಎಂದು ಧೋಲಪುರದ ಮತದಾರರೊಬ್ಬರು ಹೇಳಿದ್ದಾರೆ ಎಂದು ಆಜ್‌ತಕ್ ವರದಿ ಮಾಡಿತ್ತು. ರಾಕೇಶ್ ಜೈನ್ ಎಂಬ ವ್ಯಕ್ತಿಯೊಬ್ಬರು ದೋಷಯುಕ್ತ ಯಂತ್ರದ ಬಗ್ಗೆ ದೂರು ನೀಡಿದ್ದಾರೆ ಎಂದು ಚುನಾವಣಾ ಆಯೋಗದ ಪರವಾಗಿ ಮತದಾನ ಅಧಿಕಾರಿ ಆಜ್‌ತಕ್‌ಗೆ ಸ್ಪಷ್ಟಪಡಿಸಿದ್ದಾರೆ. ಈ ಕಾರಣದಿಂದ ಮತದಾನವನ್ನು ಎರಡು ಗಂಟೆ ಸ್ಥಗಿತಗೊಳಿಸಲಾಗಿತ್ತು. ಕಾಂಗ್ರೆಸ್ ಬೆಂಬಲಿಗರು ದಿಢೀರ್ ಪ್ರತಿಭಟನೆಯನ್ನೂ ನಡೆಸಿದ್ದರು. ಹಲವು ಮತಗಟ್ಟೆಗಳಲ್ಲಿ ಇಂಥ ದೋಷಯುಕ್ತ ಇವಿಎಂಗಳಿದ್ದವು ಎಂದು ವರದಿಯಾಗಿತ್ತು.

ಮಧ್ಯಪ್ರದೇಶದ ಬಿಂದ್ ಜಿಲ್ಲೆಯಲ್ಲಿ ಪರಿಶೀಲನೆ ವೇಳೆ ವಿವಿಪಿಎಟಿ ಜೋಡಿಸಲಾದ ಯಂತ್ರದಲ್ಲಿ ಬಿಜೆಪಿ ಪರ ಮತ ಚಲಾವಣೆಯಾಗಿರುವುದು ಪತ್ತೆಯಾಗಿದೆ. ಇದಕ್ಕೂ ಮುನ್ನ ಉತ್ತರ ಪ್ರದೇಶದಲ್ಲಿ ಬಳಸಿದ ಮತಯಂತ್ರಗಳನ್ನು ಇಲ್ಲಿಗೆ ತರಲಾಗಿದೆ ಎಂದು ಕೇಜ್ರಿವಾಲ್ ಆಪಾದಿಸಿದ್ದರು. ಚುನಾವಣಾ ಆಯೋಗ ಇದನ್ನು ಅಲ್ಲಗಳೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X