Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 15-17: 'ವಿಕಾಸ ಜೀವನ ಕಲೆ'...

ಮೇ 15-17: 'ವಿಕಾಸ ಜೀವನ ಕಲೆ' ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ10 April 2017 10:46 PM IST
share
ಮೇ 15-17: ವಿಕಾಸ ಜೀವನ ಕಲೆ ಕಾರ್ಯಾಗಾರ

ಮಂಗಳೂರು, ಎ.10: ಗೆಟ್‌ಸ್ಮಾರ್ಟ್ ಹಾಗೂ ಮೇರಿಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ವಿಕಾಸ್ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ 9ನೆ ತರಗತಿ ಪಾಸಾದ ವಿದ್ಯಾರ್ಥಿಗಳಿಗಾಗಿ ಕಾಲೇಜು ಆವರಣದಲ್ಲಿ ಮೇ 15ರಿಂದ 17ರವರೆಗೆ 'ವಿಕಾಸ ಜೀವನಕಲೆ ಕಾರ್ಯಾಗಾರ' ವಸತಿಯುಕ್ತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ವಿಕಾಸ್ ಶಿಕ್ಷಣ ಸಂಸ್ಥೆಯ ಸಲಹೆಗಾರ ಡಾ.ಅನಂತ ಪ್ರಭು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶಾಲೆಯಲ್ಲಿ ಕಂಡುಬರುವ ಸ್ಪರ್ಧಾತ್ಮಕತೆ ಮತ್ತು ತಾಂತ್ರಿಕತೆಯ ಒತ್ತಡವನ್ನು ನಿಭಾಯಿಸುವಲ್ಲಿ ಶಿಬಿರಾರ್ಥಿಗಳನ್ನು ಸಶಕ್ತಗೊಳಿಸುವುದು ಇದರ ಉದ್ದೇಶವಾಗಿದೆ ಎಂದವರು ಹೇಳಿದರು. ಈ ಶಿಬಿರವು ವಿಕಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೃಷ್ಣ ಜೆ. ಪಾಲೇಮಾರ್, ಸಂಸ್ಥೆಯ ಪ್ರಾಂಶುಪಾಲ ಡಾ. ರಾಜಾರಾಂ ರಾವ್, ಡಾ. ಉಮೇಶ್ ಭೂಷಿ ಮತ್ತಿತರ ಗಣ್ಯರ ಸಲಹೆಯ ಮೇರೆಗೆ ಜರಗಲಿದೆ ಎಂದರು.

ವೇದಿಕ್ ಮ್ಯಾಥಮೆಟಿಕ್ಸ್ ಕುರಿತು ಆದರ್ಶ್ ಗೋಖಲೆ, ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ಮಂಜುಳಾ ರಾವ್ ಹಾಗೂ ಡಾ.ಸುಫಲಾ ಕೋಟ್ಯಾನ್, ಜೀವನಕಲೆ ಮತ್ತು ಮೃದುಕಲೆ ಕುರಿತು ಸುಧೀಂದ್ರ ಶಾಂತಿ, ಸಾರಿಗೆ ನಿಯಮ ಮತ್ತು ನಿಬಂಧನೆಗಳ ಕುರಿತು ಜೋ ಗೊನ್ಸಾಲ್ವಿಸ್, ಮೂಲ ಪ್ರಥಮ ಚಿಕಿತ್ಸೆ ಕುರಿತು ಡಾ.ಪ್ರಸನ್ನ, ಸ್ವರಕ್ಷಣೆ ಕುರಿತು ಕಾರ್ತಿಕ್ ಕಟೇಲ್, ಅಡುಗೆ ಕುರಿತು ಲೆಸ್ಟರ್ ಮಾರ್ತಾ, ಕ್ರಾಫ್ಟ್ ಆ್ಯಂಡ್ ಸ್ಕೋರ್ ಈವನ್ ಮೋರ್ ಕುರಿತು ಗೋಪಾಡ್ಕರ್ ಉಪನ್ಯಾಸ ನೀಡಲಿದ್ದಾರೆ ಎಂದವರು ಮಾಹಿತಿ ನೀಡಿದರು.

 ಶಿಬಿರದಲ್ಲಿ ಭಾಗವಹಿಸುವ ಎಲ್ಲರಿಗೂ ಮಾನ್ಯತಾ ಪತ್ರ ನೀಡಲಾಗುವುದು. ನೋಂದಣಿಯು ಮೇ 10ರವರೆಗೆ ನಡೆಯಲಿದೆ. ನೋಂದಣಿ ಶುಲ್ಕ, ಉಪಾಹಾರ, ಭೋಜನ, ಸ್ನಾಕ್ಸ್ ಹಾಗೂ ರಾತ್ರಿ ಭೋಜನದೊಂದಿಗೆ ಇಬ್ಬರು ನಿಲ್ಲುವಂತಹ ಕೊಠಡಿಗೆ 750 ರೂ. ಶುಲ್ಕ ನಿಗದಿ ಮಾಡಲಾಗಿದೆ. ಶಿಬಿರದಲ್ಲಿ ಹುಡುಗರು ಹಾಗೂ ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್‌ಗಳಿವೆ. ಆಸಕ್ತರು ತಮ್ಮ ಹೆಸರನ್ನು ವಿಕಾಸ್ ಪ್ರಿ ಯುನಿವರ್ಸಿಟಿ ಕಾಲೇಜು, ಮೇರಿಹಿಲ್, ಏರ್‌ಪೋರ್ಟ್ ರಸ್ತೆ, ಮಂಗಳುರು ಇಲ್ಲಿ ನೋಂದಾಯಿಸಬಹುದು. puc@vikascollege.com ಅಥವಾ www.vikascollege.com ನ್ನು ಸಂಪರ್ಕಿಸಬಹುದು ಎಂದವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ರಾಜಾರಾಂ ರಾವ್, ವಿಕಾಸ್ ಪಿಯು ಕಾಲೇಜಿನ ನಿರ್ದೇಶಕಿ ಮಂಜುಳಾ, ಪಾರ್ಥ ಸಾರಥಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X