Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬೇಡ್ಕರ್ ಬಗ್ಗೆ ಗಾಂಧೀಜಿಯವರಲ್ಲಿ...

ಅಂಬೇಡ್ಕರ್ ಬಗ್ಗೆ ಗಾಂಧೀಜಿಯವರಲ್ಲಿ ತಪ್ಪು ಕಲ್ಪನೆ ಇತ್ತು: ಪ್ರೊ.ರವಿವರ್ಮಕುಮಾರ್

ವಾರ್ತಾಭಾರತಿವಾರ್ತಾಭಾರತಿ10 April 2017 11:26 PM IST
share
ಅಂಬೇಡ್ಕರ್ ಬಗ್ಗೆ ಗಾಂಧೀಜಿಯವರಲ್ಲಿ ತಪ್ಪು ಕಲ್ಪನೆ ಇತ್ತು: ಪ್ರೊ.ರವಿವರ್ಮಕುಮಾರ್

ಬೆಂಗಳೂರು, ಎ.10: ದಲಿತ ಮತ್ತು ಮಹಿಳೆಯರ ಸಮಾನತೆಯ ಪರವಾಗಿ ಧ್ವನಿ ಎತ್ತಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಮುಖಾಮುಖಿ ಭೇಟಿಯಾಗುವ ಮುನ್ನ ಗಾಂಧೀಜಿಯವರಲ್ಲಿ ಅಂಬೇಡ್ಕರ್ ಬಗ್ಗೆ ತಪ್ಪು ಕಲ್ಪನೆ ಇತ್ತು. ಇವನ್ಯಾರೋ ತಲೆಕೆಟ್ಟ ಬ್ರಾಹ್ಮಣ ಇರಬೇಕು ಎಂದು ಗಾಂಧೀಜಿ ಅಂದುಕೊಂಡಿದ್ದರು ಎಂದು ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಹೇಳಿದ್ದಾರೆ.

ಸೋಮವಾರ ನಗರದ ನ್ಯಾಷನಲ್ ಕಾಲೇಜಿನ ಡಾ.ಎಚ್.ಎನ್ ಮಲ್ಟಿಮೀಡಿಯಾ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂಬೇಡ್ಕರ್ ಮತ್ತು ಪ್ರಜಾಪ್ರಭುತ್ವ ವಿಷಯ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದೇಶದಲ್ಲಿ ಶಿಕ್ಷಣ ಪಡೆದು ದೇಶಕ್ಕೆ ಹಿಂದಿರುಗಿದ ಅಂಬೇಡ್ಕರ್ ಯಾರೆಂದು ಗಾಂಧೀಜಿಯವರಿಗೆ ಗೊತ್ತಿರಲಿಲ್ಲ. ದಲಿತ ಮತ್ತು ಮಹಿಳೆಯರ ಸಮಾನತೆಯ ಪರವಾಗಿ ಧ್ವನಿ ಎತ್ತಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಇವನ್ಯಾರೋ ತಲೆಕೆಟ್ಟ ಬ್ರಾಹ್ಮಣನಿರಬೇಕು ಎಂದು ಗಾಂಧೀಜಿ ಅಂದುಕೊಂಡಿದ್ದರು ಎಂದವರು ಹೇಳಿದರು.

ಮೊದಲನೆ ದುಂಡು ಮೇಜಿನ ಸಭೆಯಲ್ಲಿ ಅಂಬೇಡ್ಕರ್ ಐದು ದಿನಗಳ ಕಾಲ ವಿಷಯ ಮಂಡಿಸಿದ ನೈಪುಣ್ಯತೆಗೆ ಇಡೀ ವಿಶ್ವವೇ ಮೆಚ್ಚಿ ತಲೆದೂಗಿತ್ತು.  ಬ್ರಿಟಿಷ್ ಸರಕಾರವೂ ಅವರ ವಾದವನ್ನು ಮೆಚ್ಚಿಕೊಂಡಿತ್ತು. ಅಲ್ಲಿಯವರೆಗೂ ಅಂಬೇಡ್ಕರ್ ಯಾರೆಂದು ಗಾಂಧೀಜಿಯವರಿಗೆ ಗೊತ್ತಿರಲಿಲ್ಲ. ಮೊದಲನೆ ದುಂಡುಮೇಜಿನ ಸಭೆಯ ಬಳಿಕ ಅಂಬೇಡ್ಕರ್ ಅವರನ್ನು ಭೇಟಿ ಮಾಡುವಂತೆ ಗಾಂಧೀಜಿಯವರು ಮನವಿ ಮಾಡಿದ್ದರು. ಇವರಿಬ್ಬರ ಮೊದಲ ಭೇಟಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುವಂತೆ ಅಂಬೇಡ್ಕರ್ ಅವರನ್ನು ಗಾಂಧೀಜಿಯವರು ಪರಿಪರಿಯಾಗಿ ಕೇಳಿಕೊಂಡಿದ್ದರು. ಆದರೆ ಗಾಂಧೀಜಿಯವರ ಮನವಿಯನ್ನು ತಿರಸ್ಕರಿಸಿ,ದೇಶದಲ್ಲಿ ಸೋದರತೆ ಸಮಾನತೆ ಸ್ಥಾಪಿಸುವುದೇ ನನ್ನ ಮೊದಲ ಆದ್ಯತೆ ಎಂದು ಹೇಳುವ ಮೂಲಕ ಅಂಬೇಡ್ಕರ್ ಸ್ವಾಭಿಮಾನವನ್ನು ಮೆರೆದಿದ್ದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎನ್‌ಈಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜರೆಡ್ಡಿ ಉಪಪ್ರಾಂಶುಪಾಲ ತಿಪ್ಪೇಗೌಡ, ಉಪನ್ಯಾಸಕ ರವಿಕುಮಾರ್ ಬಾಗಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X