ಎ.12,13 ರಂದು ಎ.ಜೆ. ಇನ್‌ಸ್ಟಿಟ್ಯೂಟ್‌ನಲ್ಲಿ ರಾಷ್ಟ್ರೀಯ ಸಮ್ಮೇಳನ
ಮಂಗಳೂರು,ಎ.10:ಎ.ಜೆ.ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ವತಿಯಿಂದ ಎ.12,13ರಂದು ಸಂಸ್ಥೆಯ ಆಡಿಟೋರಿಯಂನಲ್ಲಿ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಟಿ. ಜಯಪ್ರಕಾಶ್ ರಾವ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
"ಸ್ಕಿಲ್ ಇಂಡಿಯಾ ಟು ಲಿವರೇಜ್ ಮೇಕ್ ಇನ್ ಇಂಡಿಯಾ: ಇನಿಷಿಯೇಟಿವ್ಸ್ ಆ್ಯಂಡ್ ಚಾಲೆಂಜರ್ಸ್" ವಿಷಯದ ಕುರಿತು ಸಮ್ಮೇಳನ ನಡೆಯಲಿದೆ. ಎ.12ರಂದು ಬೆಳಗ್ಗೆ 10ಕ್ಕೆ ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ಅಧ್ಯಕ್ಷ, ಆಡಳಿತ ನಿರ್ದೇಶಕ ಆಲೆನ್ ಪಿರೇರಾ ಉದ್ಘಾಟಿಸಲಿದ್ದು, ಡಾ. ಎ.ಜೆ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟಿ ಕೆ.ಎಂ. ಉಡುಪ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆಂದು ಹೇಳಿದರು.
ಎ.13ರಂದು ಮಧ್ಯಾಹ್ನ 2:30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಮುಖ್ಯ ಪ್ರಾದೇಶಿಕ ವ್ಯವಸ್ಥಾಪಕ ಸೆಂತಿಲ್ ಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಗೌರವ ಕಾರ್ಯದರ್ಶಿ ಪ್ರವೀಣ್ ಕುಮಾರ್ ಕಲ್ಬಾವಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಲಕ್ನೋ ವಿವಿಯ ರೀಜನಲ್ ಸೆಂಟರ್ ಫಾರ್ ಅರ್ಬನ್ ಆ್ಯಂಡ್ ಎನ್ವಿರಾನ್‌ಮೆಂಟಲ್ ಸ್ಟಡೀಸ್‌ನ ಸಹಾಯಕ ನಿರ್ದೇಶಕ ಡಾ. ಎ.ಕೆ. ಸಿಂಗ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಹಾಗೂ ಎಂಟರ್ ಪ್ರಿನಿಯರ್‌ಶಿಪ್ ವಿಷಯ ಕುರಿತು ವಿಚಾರಗೋಷ್ಠಿಗಳು ನಡೆಯಲಿದ್ದು, ಅರುಣ್ ವಿ.ಜೆ., ಡಾ.ಪಿ. ಸೆಲ್ವರಾಜ್ ಹಾಗೂ ಡಾ.ಒ. ಪಿ. ಸಿಂಗ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೊಷ್ಠಿಯಲ್ಲಿ ಅಭಿಲಾಷ್, ಜಯಕುಮಾರ್, ರಾಬಿನ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.







