ಬೈಕ್‌ಗೆ ಟ್ಯಾಂಕರ್ ಢಿಕ್ಕಿ: ಸವಾರ ಸಾವು

ಮಂಗಳೂರು, ಎ. 10: ಟ್ಯಾಂಕರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಎ.ಜೆ.ಆಸ್ಪತ್ರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ. ಮೃತ ಯುವಕನನ್ನು ಸುರತ್ಕಲ್ ನಿವಾಸಿ ಸದಾನಂದ ಶೆಟ್ಟಿ (42) ಎಂದು ಗುರುತಿಸಲಾಗಿದೆ
ಇವರು ಬೈಕ್‌ನಲ್ಲಿ ಸುರತ್ಕಲ್‌ನಿಂದ ಕೆಪಿಟಿ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಕದ್ರಿ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





