Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾವೇ ತೋಡಿದ ಬಾವಿಯ ನೀರು ನಮಗಿಲ್ಲ,...

"ನಾವೇ ತೋಡಿದ ಬಾವಿಯ ನೀರು ನಮಗಿಲ್ಲ, ನಾವೇ ಮಾಡಿದ ಮೂರ್ತಿಯನ್ನು ನಾವು ಮುಟ್ಟುವಂತಿಲ್ಲ!"

ಕೇಂದ್ರ ಸಚಿವರೇ ಬಿಚ್ಚಿಟ್ಟ ಅನ್ಯಾಯದ ವ್ಯಥೆ

ವಾರ್ತಾಭಾರತಿವಾರ್ತಾಭಾರತಿ11 April 2017 9:02 AM IST
share
ನಾವೇ ತೋಡಿದ ಬಾವಿಯ ನೀರು ನಮಗಿಲ್ಲ, ನಾವೇ ಮಾಡಿದ ಮೂರ್ತಿಯನ್ನು ನಾವು ಮುಟ್ಟುವಂತಿಲ್ಲ!

ಭೋಪಾಲ್, ಎ.11: "ನೀವು ನಮ್ಮಿಂದ ಬಾವಿ ತೋಡಿಸಿದಿರಿ; ಆದರೆ ನಾವು ನೀರು ಕುಡಿಯದಂತೆ ತಡೆದಿರಿ; ನಾವು ಮೂರ್ತಿಗಳನ್ನು ಮಾಡಿದೆವು; ಆದರೆ ದೇವಸ್ಥಾನದ ಬಾಗಿಲುಗಳು ನಮಗೆ ಮುಚ್ಚಿದವು"- ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ಸಚಿವ ಥಾವರ್‌ಚಂದ್ ಗೆಹ್ಲೋಟ್ ಜಾತೀಯತೆ ವಿರುದ್ಧ ಹರಿಹಾಯ್ದದ್ದು ಹೀಗೆ.

ಉಜ್ಜಯಿನಿ ಜಿಲ್ಲೆ ನಗೋಡಾದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, "ನೀವು ನಮ್ಮಿಂದ ಬಾವಿ ತೋಡಿಸಿದಿರಿ. ಅದು ನಿಮ್ಮದಾದ ತಕ್ಷಣ ನಾವು ಅದರ ನೀರು ಕುಡಿಯದಂತೆ ತಡೆದಿರಿ. ಒಂದು ಕೆರೆ ಮಾಡಬೇಕಾದಾಗ ಕೂಲಿಗಳಾದವರು ನಾವು. ಆಗ ಅಲ್ಲಿ ನಾವು ಉಗುಳುತ್ತೇವೆ. ನಮ್ಮ ಬೆವರು ಸುರಿಯುತ್ತದೆ. ಮೂತ್ರ ಮಾಡುತ್ತೇವೆ. ಆದರೆ ಅದರಿಂದ ನೀರು ಕುಡಿಯುವ ಅವಕಾಶ ಸಿಕ್ಕಿದಾಗ, ನೀರು ಮಲಿನವಾಗುತ್ತದೆ ಎನ್ನುತ್ತೀರಿ. ದೇವಸ್ಥಾನಗಳಲ್ಲಿ ಮಂತ್ರಗಳನ್ನು ಉಚ್ಚರಿಸುತ್ತಾ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತೀರಿ. ಬಳಿಕ ನಮ್ಮ ಪಾಲಿಗೆ ದೇವಸ್ಥಾನದ ಬಾಗಿಲು ಮುಚ್ಚುತ್ತದೆ. ಯಾರು ಇದನ್ನು ಸರಿ ಮಾಡಬೇಕು? ಮೂರ್ತಿ ಕೆತ್ತಿದವರು ನಾವು; ನೀವು ಅದಕ್ಕೆ ಹಣ ಕೊಟ್ಟರೂ ಶ್ರಮ ನಮ್ಮದು. ಆದರೆ ಕನಿಷ್ಠ ನಾವು ಅದರ ದರ್ಶನ ಮಾಡಿ ಸ್ಪರ್ಶಿಸುತ್ತೇವೆ" ಎಂದು ವಿವರಿಸಿದರು.

ಇಂಡಿಯನ್ ಎಕ್ಸ್‌ಪ್ರೆಸ್, ಸಚಿವರನ್ನು ದಿಲ್ಲಿಯಲ್ಲಿ ಸಂಪರ್ಕಿಸಿದಾಗ, ಅಂಬೇಡ್ಕರ್ ಬದುಕಿದ್ದ ಕಾಲದಲ್ಲಿ ಅವರು ಎದುರಿಸಿದ ತಾರತಮ್ಯ ಮನವರಿಕೆ ಮಾಡಲು ಹೀಗೆ ಹೇಳಿದ್ದಾಗಿ ಸ್ಪಷ್ಟಪಡಿಸಿದರು. ಅದಾಗ್ಯೂ ತಾವು ಇಂದಿನ ಸ್ಥಿತಿಯನ್ನು ತೆರೆದಿಟ್ಟದ್ದಾಗಿಯೂ ಒಪ್ಪಿಕೊಂಡರು. ಸ್ವಲ್ಪಮಟ್ಟಿಗೆ ಈಗ ಸುಧಾರಣೆಯಾಗಿದ್ದರೂ ಇಂಥ ಕೆಲ ಘಟನೆಗಳು ಇಂದಿಗೂ ವರದಿಯಾಗುತ್ತಿವೆ" ಎಂದು ಸಮರ್ಥಿಸಿಕೊಂಡರು.

"ನಾನು ಸಚಿವ. ಇಂಥ ವರದಿಗಳು ಬರುತ್ತಲೇ ಇರುತ್ತವೆ. ಅದು ಕಡಿಮೆಯಾಗಿರಬಹುದು. ಆದರೆ ಇಂದಿಗೂ ಸಮಾಜದಲ್ಲಿ ಈ ಸ್ಥಿತಿ ಇದೆ"

ಪರಿಶಿಷ್ಟ ಜಾತಿಗೆ ಸೇರಿದ ಗೆಹ್ಲೋಟ್ ತಾವು ಕೂಡಾ ಯುವಕರಾಗಿದ್ದಾಗ ಇಂಥ ತಾರತಮ್ಯ ಎದುರಿಸಿದ್ದಾಗಿ ವಿವರಿಸಿದರು. ರತ್ಲಾನ್ ಹಾಸ್ಟೆಲ್‌ನಲ್ಲಿ ಕೆಳಜಾತಿಯ ವಿದ್ಯಾರ್ಥಿಗಳಿಗೆ ದೇವಸ್ಥಾನ ಭೇಟಿಗೆ ಭದ್ರತೆ ಒದಗಿಸಬೇಕಾಗುತ್ತಿತ್ತು ಎಂದು ನೆನಪಿಸಿಕೊಂಡರು.

ಉಜ್ಜಯಿನಿ ಜಿಲ್ಲೆ ರುಪೆಟಾ ಜಿಲ್ಲೆಯಲ್ಲಿ ಜನಿಸಿದ ಗೆಹ್ಲೋಟ್ (68) ಮಧ್ಯಪ್ರದೇಶ ವಿಧಾನಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದರು. 1990-92ರ ಅವಧಿಯಲ್ಲಿ ರಾಜ್ಯ ಸಚಿವರಾಗಿದ್ದರು. 1996ರಲ್ಲಿ ಮೊಟ್ಟಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ಬಳಿಕ ಮೂರು ಬಾರಿ ಲೋಕಸಭೆಗೆ ಆಯ್ಕೆಯಾದರು. 2012ರಲ್ಲಿ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X