ಅಕ್ರಮ ಮರಳು ಸಾಗಾಟ: 11 ಲಾರಿಗಳು ಪೊಲೀಸ್ ವಶ

ಗದಗ, ಎ.11: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 11 ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿ ಮೂಲದ ಲಾರಿಗಳು, ಕೊಪ್ಪಳ ಜಿಲ್ಲೆಯಿಂದ ಹುಬ್ಬಳ್ಳಿಗೆ ಮರಳನ್ನು ಸಾಗಿಸುತ್ತಿದ್ದವು. ಗದಗ ಗ್ರಾಮೀಣ ಪೊಲೀಸರ ಕಾರ್ಯಾಚರಣೆಯಿಂದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ 11 ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಚಾಲಕರು ಲಾರಿ ಬಿಟ್ಟು ಪರಾರಿಯಾಗಿದ್ದಾರೆ.
ಘಟನೆ ಕುರಿತು ಗದಗ ಗ್ರಾಮಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





