Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇ-ಮಾರ್ಕೆಟ್‌ನಲ್ಲಿ ಅಗತ್ಯ ವಸ್ತು...

ಇ-ಮಾರ್ಕೆಟ್‌ನಲ್ಲಿ ಅಗತ್ಯ ವಸ್ತು ಖರೀದಿಸಿ: ಅನುರಾಧಾ

ವಾರ್ತಾಭಾರತಿವಾರ್ತಾಭಾರತಿ11 April 2017 7:53 PM IST
share
ಇ-ಮಾರ್ಕೆಟ್‌ನಲ್ಲಿ ಅಗತ್ಯ ವಸ್ತು ಖರೀದಿಸಿ: ಅನುರಾಧಾ

ಉಡುಪಿ, ಎ.11: ಸರಕಾರದ ಎಲ್ಲಾ ಇಲಾಖೆಗಳು ಇನ್ನು ಮುಂದೆ ತಮ್ಮ ಕಚೇರಿ ಕೆಲಸಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಕೇಂದ್ರ ಸರಕಾರ ಸಿದ್ಧ ಪಡಿಸಿರುವ ಗವರ್ನಮೆಂಟ್ ಇ-ಮಾರ್ಕೆಟ್(ಜೆಮ್)ನಲ್ಲಿ ಖರೀದಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳಿಗೆ ಗವರ್ನಮೆಂಟ್ ಇ-ಮಾರ್ಕೆಟ್ ಬಳಕೆ ಕುರಿತು ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡುತಿದ್ದರು.

ಕೇಂದ್ರ ಮತ್ತು ರಾಜ್ಯ ಸರಕಾರದ ಎಲ್ಲಾ ಇಲಾಖೆಗಳು ಗವರ್ನಮೆಂಟ್ ಇ-ಮಾರ್ಕೆಟ್‌ನಲ್ಲಿ ಅತ್ಯಂತ ಕಡಿಮೆ ದರದಲ್ಲಿ, ಉತ್ತಮ ಗುಣಮಟ್ಟದ ವಸ್ತುಗಳನ್ನು ಖರೀದಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಮಧ್ಯವರ್ತಿ ಅಥವಾ ಭ್ರಷ್ಟಾಚಾರಕ್ಕೆ ಆಸ್ಪದ ಇಲ್ಲದೇ ವ್ಯವಹಾರ ನಡೆಯು ವುದರಿಂದ ಅತ್ಯಂತ ಪಾರದರ್ಶಕವಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ ಇಲ್ಲಿಂದ ಖರೀದಿಸುವ ವಸ್ತುಗಳನ್ನು ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಕಂಪೆನಿಗಳಿಗೆ ಹಿಂದಿರುಗಿಸುವ ವ್ಯವಸ್ಥೆ ಕೂಡಾ ಇದ್ದು, ಎಲ್ಲಾ ಇಲಾಖೆಗಳು ಇದರ ಪ್ರಯೋಜನ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಾಗಾರದಲ್ಲಿ ತರಬೇತಿ ಕೇಂದ್ರದ ಈ ಕಾಮರ್ಸ್ ಇಲಾಖೆಯ ಸಲ್ಡಾನ ಮಾತನಾಡಿ, 2016ರಲ್ಲಿ ಆರಂಭಗೊಂಡಿರುವ ಈ ವೆಬ್ ಮೂಲಕ, ಕೇಂದ್ರ ಸರಕಾರದ ಹಲವು ಇಲಾಖೆಗಳು ಈಗಾಗಲೇ ಖರೀದಿ ನಡೆಸುತ್ತಿವೆ. ಪ್ರಾರಂಭದಲ್ಲಿ 1000 ವಸ್ತುಗಳ ಖರೀದಿ ಇದ್ದು ಪ್ರಸ್ತುತ 17,000 ಕ್ಕೂ ಹೆಚ್ಚು ವಸ್ತುಗಳು ಇದರಲ್ಲಿ ದೊರಕುತ್ತಿವೆ ಎಂದರು.
ಅಲ್ಲದೇ ಸರಬರಾಜುದಾರರರೂ ಸಹ ತಮ್ಮ ಸರಕುಗಳನ್ನು ಮಾರಾಟ ಮಾಡಲು ಉತ್ಸುಕರಾಗಿರುವ ಕಾರಣ ಹಲವು ವಸ್ತುಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ಇಲ್ಲಿ ದೊರೆಯುತ್ತಿವೆ ಎಂದು ತಿಳಿಸಿದರು.

ತರಬೇತಿಯಲ್ಲಿ ಕೇಂದ್ರದ ಇ ಕಾಮರ್ಸ್ ಇಲಾಖೆಯ ಅಂಬರೀಷ್, ಎನ್‌ಐಸಿಯ ಮಂಜುನಾಥ್, ಅರವಿಂದ್ ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X