Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಕಪ್ಪತಗುಡ್ಡ’ ಮೀಸಲು ಅರಣ್ಯ ಪ್ರದೇಶ:...

‘ಕಪ್ಪತಗುಡ್ಡ’ ಮೀಸಲು ಅರಣ್ಯ ಪ್ರದೇಶ: ಶೀಘ್ರವೇ ಅಧಿಸೂಚನೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ11 April 2017 8:25 PM IST
share
‘ಕಪ್ಪತಗುಡ್ಡ’ ಮೀಸಲು ಅರಣ್ಯ ಪ್ರದೇಶ: ಶೀಘ್ರವೇ ಅಧಿಸೂಚನೆ ಪ್ರಕಟ

ಬೆಂಗಳೂರು, ಎ.11: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಒಳಪಟ್ಟಿದ್ದ "ಕಪ್ಪತಗುಡ್ಡ" ಪ್ರದೇಶವನ್ನು ಮೀಸಲು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಿ ರಾಜ್ಯ ಸರಕಾರವು ಶೀಘ್ರವೇ ಅಧಿಸೂಚನೆ ಹೊರಡಿಸಲು ನಿರ್ಧರಿಸಿದೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಕಪ್ಪತಗುಡ್ಡಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಯ ವಿವೇಚನೆಗೆ ಬಿಡಲಾಗಿತ್ತು. ಇದೀಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪತಗುಡ್ಡ ಪ್ರದೇಶವನ್ನು ಸಂರಕ್ಷಿತ ಮೀಸಲು ಅರಣ್ಯ ಎಂದು ತೀರ್ಮಾನಿಸಿ ಕಡತಕ್ಕೆ ಸಹಿ ಹಾಕಿದ್ದು, ಆ ಕಡತವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಮಾನಾಥ ರೈಗೆ ತಲುಪಿಸಿದ್ದಾರೆ. ಅರಣ್ಯ ಸಚಿವಾಲಯದಿಂದಲೂ ಕಡತಕ್ಕೆ ಹಸಿರು ನಿಶಾನೆ ಸಿಕ್ಕಿರುವುದರಿಂದ ರಾಜ್ಯ ಸರಕಾರವು ಒಂದೆರಡು ದಿನಗಳಲ್ಲಿ ಕಪ್ಪತಗುಡ್ಡ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಎಂದು ಘೋಷಿಸಿ ಅಧಿಸೂಚನೆ ಹೊರಡಿಸಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿರುವ ಈ ಕಪ್ಪತಗುಡ್ಡ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ನೀಡಬಾರದು. ಅದನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಸರಕಾರ ಘೋಷಿಸಬೇಕು ಎಂದು ಆಗ್ರಹಿಸಿ ಸತತವಾಗಿ ಹೋರಾಟ ನಡೆಯುತ್ತಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿರುವ ತೀರ್ಮಾನದಿಂದ ಪರಿಸರ ಪ್ರೇಮಿಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ನಾನು ಸಮ್ಮತಿ ನೀಡಿದ್ದೇನೆ. ವನ್ಯಜೀವಿ ಮಂಡಳಿಯ ಮುಂದಿನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿ, ಅಂತಿಮ ತೀರ್ಮಾನ ಹೊರಬೀಳಲಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಜನರ ಆತಂಕ ನಿವಾರಣೆ: ಎಚ್.ಕೆ.ಪಾಟೀಲ್
ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಬೇಕೆಂಬ ಹೋರಾಟಕ್ಕೆ ಜಯ ಸಿಕ್ಕಿದ್ದು, ಇದರಿಂದ ಉತ್ತರ ಕರ್ನಾಟಕ ಭಾಗದ ಜನರಲ್ಲಿದ್ದ ಆತಂಕ ನಿವಾರಣೆಯಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂಂದಿಗೆ ಮಾತನಾಡಿದ ಅವರು, ಕೆಲಸದ ಒತ್ತಡದ ನಡುವೆಯೂ ಸೂಕ್ತ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ರಮಾನಾಥ ರೈಯವರಿಗೆ ಉತ್ತರ ಕರ್ನಾಟಕ ಭಾಗದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯಪ್ರದೇಶವೆಂದು ಘೋಷಿಸಬೇಕೆಂದು ಉತ್ತರ ಕರ್ನಾಟಕ ಭಾಗದ ಅನೇಕ ಮಠಾಧೀಶರು, ಪರಿಸರವಾದಿಗಳು ಹಾಗೂ ಜನತೆ ಆಗ್ರಹಿಸಿದ್ದರು. ಜನರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ಇಂದು ಸಂಜೆ ಕಡತಕ್ಕೆ ಸಹಿ ಹಾಕಿದ್ದಾರೆ. ಹಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡುವುದು ವಿಳಂಬವಾಗಿತ್ತು. ಆದರೆ, ಅಂತಿಮವಾಗಿ ಸರಕಾರ ಜನರ ಪರವಾಗಿ ನಿರ್ಧಾರ ಕೈಗೊಂಡಿದೆ ಎಂದು ಎಚ್.ಕೆ. ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X