ಎ.14ರಿಂದ ಉಡುಪಿಯಲ್ಲಿ ಅಂಬೇಡ್ಕರ್ ರಾಜ್ಯಮಟ್ಟದ ಅಧ್ಯಯನ ಶಿಬಿರ
ಉಡುಪಿ, ಎ.11: ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಾಜ್ಯಮಟ್ಟದ ಅಧ್ಯಯನ ಶಿಬಿರ ಎ.14 ಮತ್ತು15ರಂದು ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.
ಎ.14ರಂದು ಬೆಳಗ್ಗೆ 9:30ಕ್ಕೆ ನಡೆಯುವ ಈ ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು.ಈ ವೇಳೆ ಜಿಲ್ಲೆಯ ಎಲ್ಲ ಇಲಾಖಾ ಅಧಿಕಾರಿಗಳು, ಸಿಬ್ಬಂದಿವರ್ಗ ಹಾಜರಿರುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





