Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ಭವನವನ್ನು ನಗರಸಭೆಗೆ...

ಅಂಬೇಡ್ಕರ್ ಭವನವನ್ನು ನಗರಸಭೆಗೆ ಹಸ್ತಾಂತರಿಸಲು ಒತ್ತಾಯಿಸಿ ದಸಂಸ ಧರಣಿ

ವಾರ್ತಾಭಾರತಿವಾರ್ತಾಭಾರತಿ11 April 2017 10:48 PM IST
share

ತುಮಕೂರು, ಎ.11: ಶಿರಾ ತಾಪಂ ನಿರ್ವಹಿಸುತ್ತಿರುವ ಅಂಬೇಡ್ಕರ್ ಭವನವನ್ನು ನಗರಸಭೆಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಧರಣಿ ನಡೆಸಿದೆ.

ಸರಕಾರ 1.50 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಿ ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಿದೆ. ಆದರೆ ಅದರ ನಿರ್ವಹಣೆ ಸರಿಯಲ್ಲದ ಕಾರಣ ಜನರಿಗೆ ಲಭ್ಯವಾಗುತ್ತಿಲ್ಲ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ಕಟ್ಟಡ ನಗರದ ಒಳಭಾಗದಲ್ಲಿ ಇರುವುದರಿಂದ ಕಟ್ಟಡ ನಿರ್ವಹಣೆಯ ಹೊಣೆಯನ್ನು ನಗರಸಭೆಗೆ ವಹಿಸುವಂತೆ ಧರಣಿ ನಿರತ ದಲಿತ ಮುಖಂಡರು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಜೆಡಿಎಸ್ ಮುಖಂಡ ಮಾಜಿ ಸಚಿವ ಬಿ.ಸತ್ಯನಾರಾಯಣ ಪ್ರತಿಭಟನೆಗೆ ಬೆಂಬಲ ಸೂಚಿಸಿ ಧರಣಿಯಲ್ಲಿ ಪಾಲ್ಗೊಂಡರು.

ದಲಿತ ಮುಖಂಡ ಬೆಳದಮಡಗು ಭರತ್ ಕುಮಾರ್ ಮಾತನಾಡಿ, ತಳ ಸಮುದಾಯಗಳು ಇಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ ಅಧಿಕಾರ ಅನುಭವಿಸುತ್ತಿರುವುದಕ್ಕೆ ಅಂಬೇಡ್ಕರರೇ ಕಾರಣ. ಅಂತಹ ಮಹನೀಯರ ಹೆಸರಿನ ಭವನವನ್ನು ನೀವು ಸರಿಯಾಗಿ ನಿರ್ವಹಣೆ ಮಾಡದೇ, ಅವ್ಯವಹಾರಗಳ ತಾಣವಾಗಿ ಬದಲಾಗಿದೆ. ನಗರಸಭೆಯಲ್ಲಾದರೆ ಸ್ವಚ್ಚತೆ ಮಾಡಲು, ಸರಿಯಾಗಿ ನಿರ್ವಹಿಸಲು ಜನರಿದ್ದಾರೆ. ಈ ಹಿಂದೆ ತಾ.ಪಂ.ಸದಸ್ಯರ ಕೋರಿಕೆಯಂತೆ ಒಂದು ವರ್ಷ ಕಾಲಾವಕಾಶ ನೀಡಲಾಗಿತ್ತು. ಆದರೆ ಯಾವುದೇ ಬದಲಾವಣೆಯಾಗಿಲ್ಲ. ಆದ್ದರಿಂದ ಭವನವನ್ನು ನಗರಸಭೆಗೆ ವರ್ಗಾಯಿಸಿಕೊಡಿ ಎಂದು ಒತ್ತಾಯಿಸಿದರು.

ಧರಣಿಯಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಟೈರ್ ರಂಗನಾಥ್, ಲಕ್ಷ್ಮೀಕಾಂತ್, ಮಾಗೋಡು ಭೂತೇಶ್, ಮಾಗೋಡು ಯೋಗಾನಂದ್, ಕೋಟೆ ರವಿ, ತಿಪ್ಪೇಸ್ವಾಮಿ, ಕೆ.ರಾಜು, ಶಿವಣ್ಣ, ಕಿಟ್ಟಪ್ಪಾಜಿ, ಗಿರಿಯಪ್ಪ, ಕಾರೆಹಳ್ಳಿ ರಂಗನಾಥ್, ಕೆಂಚಮ್ಮ, ಸಣ್ಣ ಲಕ್ಕಮ್ಮ, ಲಕ್ಷ್ಮಕ್ಕ, ನರಸಮ್ಮ, ಪುಟ್ಟ ಲಕ್ಕಮ್ಮ, ನೀರಕಲ್ ನರಸಿಂಹಯ್ಯ, ಬಿ.ಎನ್.ಬ್ರಹ್ಮಾನಂದ್, ಶ್ರೀನಿವಾಸ ನಾಯ್ಕ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X