Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಜಾಗೊಂಡ ಅಂಗನವಾಡಿ ಕಾರ್ಯಕರ್ತೆಯರ ಮರು...

ವಜಾಗೊಂಡ ಅಂಗನವಾಡಿ ಕಾರ್ಯಕರ್ತೆಯರ ಮರು ನೇಮಕಕ್ಕೆ ಸಚಿವ ಸಂಪುಟ ಅಸ್ತು: ಸಚಿವ ಜಯಚಂದ್ರ

ಜೂನ್ ಮೊದಲ ವಾರದಲ್ಲಿ ವಿಧಾನ ಮಂಡಲದ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ12 April 2017 6:48 PM IST
share
ವಜಾಗೊಂಡ ಅಂಗನವಾಡಿ ಕಾರ್ಯಕರ್ತೆಯರ ಮರು ನೇಮಕಕ್ಕೆ ಸಚಿವ ಸಂಪುಟ ಅಸ್ತು: ಸಚಿವ ಜಯಚಂದ್ರ

ಬೆಂಗಳೂರು, ಎ. 11: ಗ್ರಾಪಂ ಚುನಾವಣೆಗಳಲ್ಲಿ ಸ್ಪರ್ಧಿಸಿ ಚುನಾಯಿತರಾಗಿ, ಸೇವೆಯಿಂದ ವಜಾಗೊಂಡಿದ್ದ 28 ಮಂದಿ ಅಂಗನವಾಡಿ ಕಾರ್ಯಕತೆರ್ಯರು, 10 ಮಂದಿ ಸಹಾಯಕಿಯರನ್ನು ಮರು ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

ಬುಧವಾರ ವಿಧಾನಸೌಧದ ಸಂಪುಟ ಸಭಾ ಮಂದಿರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಸಚಿವ ಜಯಚಂದ್ರ, ಚುನಾವಣೆಯಲ್ಲಿ ಸ್ಪರ್ಧಿಸಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ವಜಾಗೊಂಡಿದ್ದ ಕಾರ್ಯಕರ್ತೆಯರು ಮತ್ತು ಸಹಾಯಕರ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿದ ಸಂಪುಟವು ಅಂತಿಮ ಎಚ್ಚರಿಕೆ ನೀಡಿ, ಮರು ನೇಮಕ ಮಾಡಿ ಅವರ ಸೇವೆಯನ್ನು ಮುಂದುವರೆಸಲು ತೀರ್ಮಾನಿಸಿದೆ ಎಂದರು.

ಜಿಎಸ್‌ಟಿಗೆ ಅಧಿವೇಶನ: ಜುಲೈ ತಿಂಗಳಿನಿಂದ ರಾಷ್ಟ್ರವ್ಯಾಪಿ ಸರಕು ಮತ್ತು ಸೇವಾ ಕಾಯಿದೆ (ಜಿಎಸ್‌ಟಿ) ಜಾರಿಗೊಳಿಸಬೇಕೆಂಬ ಹಿನ್ನೆಲೆಯಲ್ಲಿ ಲೇಖಾನುದಾನ ಪಡೆಯಲಾಗಿದ್ದ 2017-18ನೆ ಸಾಲಿನ ಆಯವ್ಯಯದ ಅನುಮೋದನೆ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ಕಲ್ಪಿಸಲು ಜೂನ್ ಮೊದಲ ವಾರದಲ್ಲಿ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ಸಂಪುಟ ನಿರ್ಧರಿಸಿದೆ ಎಂದರು.

ಅನುಮೋದನೆ: ನಗರದ ಕ್ರೆಸೆಂಟ್ ರಸ್ತೆಯಲ್ಲಿ ನ್ಯಾಯಾಂಗ ಅಕಾಡಮಿ ನೂತನ ಕಟ್ಟಡ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಅಭಿಯೋಜಕರು, ನ್ಯಾಯಾಂಗ ಅಧಿಕಾರಿಗಳು, ನ್ಯಾಯಾಧೀಶರಿಗೆ ತರಬೇತಿ ನೀಡಿ ಅವರ ವೃತ್ತಿ ಕೌಶಲ್ಯ ವೃದ್ಧಿಸುವ ಕಾಯಕದಲ್ಲಿ ತೊಡಗಿರುವ ನ್ಯಾಯಾಂಗ ಅಕಾಡಮಿ ಕಟ್ಟಡದ ಮೊದಲ ಹಂತದ ಕಾಮಗಾರಿ 12 ಕೋಟಿ ರೂ.ವೆಚ್ಚದಲ್ಲಿ ಪ್ರಾರಂಭವಾಗಿದ್ದು, ಮುಂದುವರೆದ ಕಾಮಗಾರಿಗಳಿಗೆ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ 84.02 ಕೋಟಿ ರೂ.ಮಂಜೂರಾತಿಗೆ ಸಂಪುಟವು ಸಮ್ಮತಿಸಿದೆ ಎಂದರು.

ಯೋಜನೆಗಳಿಗೆ ಒಪ್ಪಿಗೆ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ 57 ಕೋಟಿ ರೂ., ಚಿತ್ರದುರ್ಗದ ಹೊಸದುರ್ಗದಲ್ಲಿ 25.6 ಕೋಟಿ ರೂ. ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 200 ಕೋಟಿ ರೂ.ವೆಚ್ಚದಲ್ಲಿ ಒಳಚರಂಡಿ ಯೋಜನೆಗಳನ್ನು ಅನುಷ್ಠಾನಕ್ಕೆ ಒಪ್ಪಿಗೆ ನೀಡಿದೆ ಎಂದು ಅವರು ಮಾಹಿತಿ ನೀಡಿದರು.

ಸಶಸ್ತ್ರ ಮೀಸಲು ಪಡೆ ಸ್ಥಾಪನೆ: ಕೆಂಗೇರಿ ಸಮೀಪದ ಉಲ್ಲಾಳದಲ್ಲಿ 21.14 ಎಕರೆ ಪ್ರದೇಶದಲ್ಲಿ 19.7 ಕೋಟಿ ರೂ.ವೆಚ್ಚದಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಸ್ಥಾಪಿಸಲು ಸಮ್ಮತಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾ.ಪಂ.ಅನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಂಪುಟ ನಿರ್ಧರಿಸಿದೆ ಎಂದವರು ಮಾಹಿತಿ ನೀಡಿದರು.

‘2016-17ನೆ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಉಡುಪಿ, ಮೈಸೂರು, ಬಳ್ಳಾರಿ, ವಿಜಯಪುರ, ಕಲಬುರಗಿ ಹಾಗೂ ಬೆಳಗಾವಿ ನಗರಗಳಲ್ಲಿ ಆಯ್ದ ಕೀಡೆಗಳಿಗೆ ಮೀಸಲಿರುವ ಕ್ರೀಡಾ ವಸತಿ ನಿಲಯಗಳನ್ನು 15.6 ಕೋಟಿ ರೂ ವೆಚ್ಚದಲ್ಲಿ ಕ್ರೀಡಾ ಅಕಾಡಮಿಗಳನ್ನಾಗಿ ಪರಿವರ್ತಿಸಲು ಸಂಪುಟವು ನಿರ್ಣಯಿಸಿದೆ’

-ಸಚಿವ ಜಯಚಂದ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X