ಎ.16 ರಂದು ಜಿಲ್ಲಾ ದಲಿತ್ ಸೇವಾ ಸಮಿತಿ ದಶಮಾನೋತ್ಸವ, ಅಂಬೇಡ್ಕರ್ ಜನ್ಮದಿನಾಚರಣೆ
ಪುತ್ತೂರು,ಎ.12: ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ದಶಮಾನೋತ್ಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ 126ನೆ ಜನ್ಮದಿನಾಚರಣೆಯು ಎ.16ರಂದು ವಿಟ್ಲ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ದಲಿತ್ ಸೇವಾ ಸಮತಿಯ ಅಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು,ಸಂಸದ ನಳಿನ್ ಕುಮಾರ್ ಕಟೀಲ್ ಅಂಬೇಡ್ಕರ್ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ನ್ಯಾನ ಬಾಳೆಕೋಡಿ ಕ್ಷೇತ್ರದ ಸದ್ಗುರು ಶಶಿಕಾಂತಮಣಿ ಸ್ವಾಮೀಜಿ, ಶಾಸಕಿ ಶಕುಂತಳಾ ಶೆಟ್ಟಿ, ದ.ಕ. ಪೊಲೀಸ್ ವರಿಷ್ಠಾಧಿಕಾರಿ ಗುಲಾಬ್‌ರಾವ್ ಬೊರಸೆ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಅಂಬೇಡ್ಕರ್ ನಿಗಮದ ವ್ಯವಸ್ಥಾಪಕ ಸಿದ್ದರಾಜು ಭಾಗವಹಿಸಲಿದ್ದಾರೆಂದುತಿಳಿಸಿದರು.
ಈ ಸಂದರ್ಭ ಸ್ಥಾಪಕ,ಉಪಾಧ್ಯಕ್ಷ ಭಾಸ್ಕರ ನೆಲ್ಲಿಗುಡ್ಡೆ, ಸ್ಥಾಪಕ ಕಾರ್ಯದರ್ಶಿ ಮೋನಪ್ಪ ಸಾಲೆತ್ತೂರು ಮತ್ತು ಸ್ಥಾಪಕ ಜೊತೆ ಕಾರ್ಯದರ್ಶಿ ರಘು ನಾಯ್ಕ ದಡ್ಡಲ್ತಡ್ಕ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿಟ್ಲ, ತಾಲೂಕು ಸಮಿತಿಯ ಮಾಜಿ ಅಧ್ಯಕ್ಷ ದಾಮೋದರ ಮುರ ಮತ್ತು ಮಾಜಿ ಉಪಾಧ್ಯಕ್ಷ ಲೋಕೇಶ್ ತೆಂಕಿಲ ಉಪಸ್ಥಿತರಿದ್ದರು.







