ಎ.15ರಂದು ಮಂಗಳೂರಿನಲ್ಲಿ 'ಬಿಸು ಪರ್ಬ'
ಮಂಗಳೂರು,ಎ12: ಬಂಟರ ಯಾನೆ ನಾಡವರ ಮಾತೃಸಂಘದ ವತಿಯಿಂದ ಎ.15ರಂದು ಸಂಜೆ 4:30ಕ್ಕೆ ಬಿಸುಪರ್ಬ ಕಾರ್ಯಕ್ರಮವು ಬಂಟ್ಸ್‌ಹಾಸ್ಟೆಲ್‌ನ ಗೀತಾ ಎಸ್.ಎಂ. ಶೆಟ್ಟಿ ಸಭಾಭವನದಲ್ಲಿ ಜರಗಲಿದೆ.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದು,ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಲೇಖಕಿ ಆಶಾ ದಿಲೀಪ್ ರೈ ಸುಳ್ಯಮೆ ಉಪನ್ಯಾಸ ನೀಡಲಿದ್ದಾರೆ.
ಸಮಾರಂಭದಲ್ಲಿ ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಗುವುದು ಎಂದು ತಾಲೂಕು ಸಮಿತಿಯ ಸಂಚಾಲಕ ಎಸ್ ಜಯರಾಮ ಸಾಂತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





