ಸ್ವಾಭಿಮಾನ, ಆತ್ಮಗೌರಕ್ಕೆ ಸೋಲಾಗಿದೆ: ಶ್ರೀನಿವಾಸ್ ಪ್ರಸಾದ್

ಬೆಂಗಳೂರು,ಎ.13: ಸ್ವಾಭಿಮಾನ, ಆತ್ಮಗೌರಕ್ಕೆ ಸೋಲಾಗಿದೆ. ಇನ್ನೂ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಸಕ್ರೀಯ ರಾಜಕಾರಣದಿಂದ ದೂರ ಉಳಿಯುವುದಿಲ್ಲ ಎಂದು ನಂಜನಗೂಡು ಕ್ಷೇತ್ರದಲ್ಲಿ ಸೋಲುಂಡ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಫಲಿತಾಂಶ ಪ್ರಕಟವಾದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಹಳ ನೆಮ್ಮದಿಯಾಗಿ ಚುನಾವಣೆಯಲ್ಲಿ ಭಾಗವಹಿಸಿದ್ದೆ. ಇದುವರೆಗೆ ನಾನು 13 ಚುನಾವಣೆಗಳನ್ನು ಎದುರಿಸಿದ್ದೇನೆ. ಮುಂದೆ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಸ್ವಾಭಿಮಾನ ಮತ್ತು ಆತ್ಮಗೌರವವನ್ನು ಉಳಿಸಿಕೊಂಡು ಬಂದಿದ್ದೇನೆ. ನನ್ನ ಸ್ವಾಭಿಮಾನಕ್ಕೆ ಕಡಿಮೆ ಮತ ಸಿಕ್ಕಿದೆ ನಿಜ. ಆದರೆ ಜನ ನನ್ನ ಸ್ವಾಭಿಮಾನವನ್ನು ನೆಚ್ಚಿದ್ದಾರೆ. ನಂಜನಗೂಡಿನಲ್ಲಿ ಜನರಿಗೆ ಹಣದ ಹಂಚಿಕೆ ಮಾಡಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಹೇಳಿದರು.
Next Story





