ಉಪಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್ ವಿಜಯೋತ್ಸವ

ಮಂಗಳೂರು, ಎ.13: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುರುವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ನಾಯಕರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ. ನಿರೀಕ್ಷೆಯಂತೆ ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಕಾರ್ಯಕರ್ತರು ಮತ್ತಷ್ಟು ಕೆಲಸ ಮಾಡಲು ಹುರಿದುಂಬಿಸಿದಂತಾಗಿದೆ ಎಂದರು.
ದ.ಕ.ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾರ್ಪೊರೇಟರ್‌ಗಳಾದ ಡಿ.ಕೆ.ಅಶೋಕ್, ಪ್ರವೀಣ್‌ಚಂದ್ರ ಆಳ್ವ, ಸಬಿತಾ ಮಿಸ್ಕಿತ್, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ.ಸುಧೀರ್ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡರು.
Next Story





