ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿ ಶೆಟ್ಟಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಎ.13: ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಜಾಮೀನು ಕೋರಿ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ದುರ್ಗಾ ಇಂಟರ್ ನ್ಯಾಷನಲ್ ಹೊಟೇಲ್‌ನಿಂದ ತನ್ನ ಮನೆ ಇದ್ದ ಇಂದ್ರಾಳಿಗೆ ಹೋಗಿದ್ದ ಭಾಸ್ಕರ್ ಶೆಟ್ಟಿಯನ್ನುಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಹಾಗೂ ಸುಪಾರಿ ಕಿಲ್ಲರ್‌ಗಳು ಸೇರಿ ಹತ್ಯೆ ಮಾಡಿದ್ದರು ಎಂದು ಸಿಐಡಿ ವರದಿ ನೀಡಿತ್ತು.
Next Story





