Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗುಜರಾತ್-ಪುಣೆ ಹೋರಾಟ, ಲಯನ್ಸ್‌ಗೆ ಜಡೇಜ...

ಗುಜರಾತ್-ಪುಣೆ ಹೋರಾಟ, ಲಯನ್ಸ್‌ಗೆ ಜಡೇಜ ಬಲ

ವಾರ್ತಾಭಾರತಿವಾರ್ತಾಭಾರತಿ13 April 2017 10:54 PM IST
share
ಗುಜರಾತ್-ಪುಣೆ ಹೋರಾಟ, ಲಯನ್ಸ್‌ಗೆ ಜಡೇಜ ಬಲ

ರಾಜ್‌ಕೋಟ್, ಎ.13: ಹತ್ತನೆ ಆವೃತ್ತಿಯ ಐಪಿಎಲ್‌ನಲ್ಲಿ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ಗುಜರಾತ್ ಲಯನ್ಸ್ ತಂಡ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡವನ್ನು ಎದುರಿಸಲಿದ್ದು, ನಿರ್ಣಾಯಕ ಪಂದ್ಯದಲ್ಲಿ ಸ್ಟಾರ್ ಆಟಗಾರ ರವೀಂದ್ರ ಜಡೇಜ ಲಯನ್ಸ್ ತಂಡದಲ್ಲಿ ಆಡಲಿದ್ದಾರೆ.

ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಜಡೇಜಗೆ ಫಿಸಿಯೋ ಎರಡು ವಾರ ವಿಶ್ರಾಂತಿಗೆ ಸಲಹೆ ನೀಡಿದ್ದರು. ಆಲ್‌ರೌಂಡರ್ ಜಡೇಜ ಆಗಮನದಿಂದ ಗುಜರಾತ್‌ಗೆ ಶಕ್ತಿ ಬಂದಿದೆ. ಈತನಕ ಆಡಿರುವ ಎರಡೂ ಪಂದ್ಯಗಳಲ್ಲಿ ಗುಜರಾತ್ ಸೋತಿದೆ.

ಕೋಲ್ಕತಾ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಸೋತು ಟೂರ್ನಿಯನ್ನು ಆರಂಭಿಸಿದ್ದ ಗುಜರಾತ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 2ನೆ ಪಂದ್ಯವನ್ನೂ ಸೋತಿತ್ತು. ಕಳೆದ ವರ್ಷ ತನ್ನ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಪರಿಣಾಮಕಾರಿ ಪ್ರದರ್ಶನ ನೀಡಿತ್ತು. ಪ್ರಸ್ತುತ ಜಡೇಜ ಭರ್ಜರಿ ಫಾರ್ಮ್‌ನಲ್ಲಿದ್ದು, ಜಡೇಜ ಉಪಸ್ಥಿತಿಯು ತಂಡದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ.

ವಿಂಡೀಸ್‌ನ ಆಲ್‌ರೌಂಡರ್ ಡ್ವೆಯ್ನೆ ಬ್ರಾವೊ ಬುಧವಾರ ಅಭ್ಯಾಸ ನಡೆಸಿದ್ದಾರೆ. ಆದರೆ, ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಬ್ರಾವೊ ಆಡುವ ಬಗ್ಗೆ ಇನ್ನೂ ಅನುಮಾನ ಮುಂದುವರಿದಿದೆ. ಗುಜರಾತ್‌ನ ಬ್ಯಾಟಿಂಗ್ ಸರದಿ ಬಲಿಷ್ಠವಾಗಿದೆ. ಬ್ರೆಂಡನ್ ಮೆಕಲಮ್, ಆ್ಯರೊನ್ ಫಿಂಚ್, ಜೇಸನ್ ರಾಯ್, ಸುರೇಶ್ ರೈನಾ ಹಾಗೂ ದಿನೇಶ್ ಕಾರ್ತಿಕ್ ಅವರಿದ್ದಾರೆ.

ಆದರೆ, ಮೆಕಲಮ್ ಹಾಗೂ ಫಿಂಚ್ ಈವರೆಗೆ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮೊದಲೆರಡು ಪಂದ್ಯಗಳಲ್ಲಿ ಕೇವಲ 40 ಹಾಗೂ 18 ರನ್ ಗಳಿಸಿದ್ದಾರೆ. ನಾಯಕ ರೈನಾ ಕೆಕೆಆರ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 68 ರನ್ ಗಳಿಸಿದ್ದರು. ದಿನೇಶ್ ಕಾರ್ತಿಕ್ ಮಧ್ಯಮ ಕ್ರಮಾಂಕದಲ್ಲಿ(47 ರನ್) ತಂಡವನ್ನು ಆಧರಿಸಿದ್ದರು.

 ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವ ಮೂಲಕ ಐಪಿಎಲ್‌ನಲ್ಲಿ ಶುಭಾರಂಭ ಮಾಡಿದ್ದ ಪುಣೆ ತಂಡ ಪಂಜಾಬ್ ಹಾಗೂ ಡೆಲ್ಲಿ ವಿರುದ್ಧ ಸತತ ಸೋಲನುಭವಿಸಿ ಹಿನ್ನಡೆ ಅನುಭವಿಸಿದೆ. ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.

ನಾಯಕ ಸ್ಮಿತ್ ಅಸೌಖ್ಯದಿಂದಾಗಿ ಡೆಲ್ಲಿ ವಿರುದ್ಧ ಪಂದ್ಯದಿಂದ ಹೊರಗುಳಿದಿದ್ದರು. ಗುಜರಾತ್ ವಿರುದ್ಧ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. 10ನೆ ಐಪಿಎಲ್‌ನ ದುಬಾರಿ ಆಟಗಾರ ಬೆನ್ ಸ್ಟೋಕ್ಸ್ ಈತನಕ ಸಾಧಾರಣ ಪ್ರದರ್ಶನ ನೀಡಿದ್ದಾರೆ. ಎಂ.ಎಸ್. ಧೋನಿ ಫಾರ್ಮ್ ಕೂಡ ಚಿಂತೆಯ ವಿಷಯವಾಗಿದೆ.

ಆರ್‌ಸಿಬಿಗೆ ಮುಂಬೈ ಇಂಡಿಯನ್ಸ್ ಸವಾಲು

 ಬೆಂಗಳೂರು, ಎ.13: ಮೂರು ಐಪಿಎಲ್ ಪಂದ್ಯಗಳಲ್ಲಿ ಎರಡರಲ್ಲಿ ಸೋತು ಕಂಗಾಲಾಗಿರುವ ಆರ್‌ಸಿಬಿ ತಂಡ ಶುಕ್ರವಾರ ತವರು ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸತತ ಪಂದ್ಯಗಳಲ್ಲಿ ಗೆದ್ದು ಬೀಗುತ್ತಿರುವ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಫಿಟ್‌ನೆಸ್ ಟೆಸ್ಟ್‌ನಲ್ಲಿ ಪಾಸಾಗಿರುವ ನಾಯಕ ವಿರಾಟ್ ಕೊಹ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಇದು ಆರ್‌ಸಿಬಿ ಪಾಳಯದಲ್ಲಿ ಸಂಭ್ರಮ ಮೂಡಿಸಿದೆ. ಕೊಹ್ಲಿ ಭುಜನೋವಿನಿಂದಾಗಿ ಆರ್‌ಸಿಬಿ ಈವರ್ಷದ ಐಪಿಎಲ್‌ನಲ್ಲಿ ಆಡಿರುವ ಮೊದಲ 3 ಪಂದ್ಯಗಳಲ್ಲಿ ಆಡಿರಲಿಲ್ಲ. ಆರ್‌ಸಿಬಿ 3 ಪಂದ್ಯಗಳಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸಿದರೆ, ಹಾಲಿ ಚಾಂಪಿಯನ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೋತಿತ್ತು.

 ಪಂಜಾಬ್ ವಿರುದ್ಧ ಪಂದ್ಯದ ವೇಳೆ 46 ಎಸೆತಗಳಲ್ಲಿ 89 ರನ್ ಗಳಿಸಿದ್ದ ಎಬಿಡಿ ವಿಲಿಯರ್ಸ್ ತನ್ನ ಪುನರಾಗಮನವನ್ನು ಸಾರಿದ್ದರು. ಡಿವಿಲಿಯರ್ಸ್ ಏಕಾಂಗಿ ಹೋರಾಟದ ಹೊರತಾಗಿಯೂ ಆ ಪಂದ್ಯದಲ್ಲಿ ಆರ್‌ಸಿಬಿ ಸೋತಿತ್ತು.

ಕೊಹ್ಲಿ ಮುಂಬೈ ವಿರುದ್ಧ ಪಂದ್ಯಕ್ಕೆ ಲಭ್ಯವಿರುವ ವಿಷಯವನ್ನು ಡಿವಿಲಿಯರ್ಸ್ ದೃಢಪಡಿಸಿದ್ದಾರೆ. ಕೊಹ್ಲಿ ಹಾಗೂ ಡಿವಿಲಿಯರ್ಸ್ ನಾಲ್ಕನೆ ಆವೃತ್ತಿಯ ಐಪಿಎಲ್‌ನಿಂದ ಆರ್‌ಸಿಬಿ ತಂಡದಲ್ಲಿ ಆಡುತ್ತಿದ್ದಾರೆ.

ಇಂದಿನ ಪಂದ್ಯಗಳು

ಬೆಂಗಳೂರು-ಮುಂಬೈ

ಸ್ಥಳ: ಬೆಂಗಳೂರು

ಸಮಯ: ಸಂಜೆ 4:00

ಗುಜರಾತ್-ಪುಣೆ

ಸ್ಥಳ: ರಾಜ್‌ಕೋಟ್

ಸಮಯ: ಸಂಜೆ 4:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X