ನೀಟ್ ಪರೀಕ್ಷೆಯ ನಂತರವೇ ಪಿಯು ಫಲಿತಾಂಶ: ತನ್ವೀರ್ ಸೇಠ್

ರಾಯಚೂರು, ಎ.14: ನೀಟ್ ಪರೀಕ್ಷೆಯ ನಂತರವೇ ಎಸೆಸೆಲ್ಸಿ ಹಾಗೂ ಪಿಯು ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಲಿನ ಪಿಯುಸಿ ಪರೀಕ್ಷೆಗಳ ಮೌಲ್ಯಮಾಪನ ಸುಗಮವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮೇ ತಿಂಗಳ ಮೊದಲ ವಾರದಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಅದರ ನಂತರವೇ ಪಿಯು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ. ಎಸೆಸೆಲ್ಸಿ ಫಲಿತಾಂಶವನ್ನು ಮೇ 10ರ ನಂತರವೇ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
Next Story





