ದಲಿತರ ಅಭಿವೃದ್ಧಿಗೆ 27,000 ಕೋ.ಮೀಸಲು: ಸಚಿವ ಪ್ರಮೋದ್

ಉಡುಪಿ,ಎ.14: ರಾಜ್ಯ ಸರಕಾರ ದಲಿತರ ಅಬಿವೃದ್ಧಿಗಾಗಿ ಈ ವರ್ಷ 27,000 ಕೋಟಿ ರೂ.ಅನುದಾನ ಮೀಸಲಿರಿಸಿದೆ ಎಂದು ರಾಜ್ಯ ಮೀನುಗಾರಿಕಾ,ಯುವಜನ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಶುಕ್ರವಾರ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ವರ್ಗದ ದುರ್ಬಲ ಮತ್ತು ಶೋಷಿತರ ಏಳಿಗೆಗಾಗಿ ಅಂಬೇಡ್ಕರ್ ಶ್ರಮಿಸಿದ್ದರು ಎಂದು ಹೇಳಿದರು.
ಜಿಪಂ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ದುರ್ಬಲ ಮತ್ತು ಶೋಷಿತ ಜನಾಂಗದ ನಾಯಕ ಮಾತ್ರವಲ್ಲದೇ ಶಿಕ್ಷಣ ತಜ್ಞರಾಗಿ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದರು ಎಂದು ಹೇಳಿದರು.
ಡಾ.ವಾಸುದೇವ ಬೆಳ್ಳೆ 'ಅಂಬೇಡ್ಕರ್ ವ್ಯಕ್ತಿತ್ವ ಮತ್ತು ಜೀವನ' ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಇತರ ಸವಲತ್ತುಗಳನ್ನು ವಿತರಿಸಲಾಯಿತು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಬಾಬು ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ, ಅಪರ ಜಿಲಾಧಿಕಾರಿ ಜಿ.ಅನುರಾಧ, ತಹಶೀಲ್ದಾರ್ ಮಹೇಶ್ಚಂದ್ರ ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಎನ್.ರಮೇಶ್ ಸ್ವಾಗತಿಸಿದರು. ಶಂಕರ್ ದಾಸ್ ಚೇಂಡ್ಕಳ ಮತ್ತು ತಂಡದಿಂದ ಅಂಬೇಡ್ಕರ್ ಕುರಿತ ಗೀತಾಗೋಷ್ಠಿ ಕಾರ್ಯಕ್ರಮ ನಡೆಯಿತು.
ದಲಿತರ ಅಭಿವೃದ್ಧಿಗೆ 27,000 ಕೋ.ಮೀಸಲು ; ಸಚಿವ ಪ್ರಮೋದ್
ಉಡುಪಿ,ಎ.14: ರಾಜ್ಯ ಸರಕಾರ ದಲಿತರ ಅಬಿವೃದ್ಧಿಗಾಗಿ ಈ ವರ್ಷ 27,000 ಕೋಟಿ ರೂ.ಅನುದಾನ ಮೀಸಲಿರಿಸಿದೆ ಎಂದು ರಾಜ್ಯ ಮೀನುಗಾರಿಕಾ,ಯುವಜನ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಶುಕ್ರವಾರ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ವರ್ಗದ ದುರ್ಬಲ ಮತ್ತು ಶೋಷಿತರ ಏಳಿಗೆಗಾಗಿ ಅಂಬೇಡ್ಕರ್ ಶ್ರಮಿಸಿದ್ದರು. ದಲಿತ ಕಲ್ಯಾಣ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಸರಕಾರ ಮತ್ತು ಸಂಘಟನೆಗಳು, ಜನಪ್ರತಿನಿಧಿಗಳು ಪ್ರಯತ್ನಿಸ ಬೇಕಾಗಿದೆ ಎಂದರು.