ಕಾಲೇಜು ಸಮೀಪ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಮಂಗಳೂರು, ಎ. 14: ಕೊಟ್ಟಾರ ಕಾಲೇಜೊಂದರ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಾದ ಕೌಶಿಕ್ ಮತ್ತು ರವಿಕಿರಣ್ ಶುಕ್ರವಾರ ಮಧ್ಯಾಹ್ನ ಕೊಟ್ಟಾರ ಕಾಲೇಜೊಂದರ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರಿಂದ 50 ಗ್ರಾಂ ಗಾಂಜಾ, 1 ಸಾವಿರ ರೂ., ಸ್ಕೂಟರ್, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





