ಎ.23 ರಂದು ಮುಲ್ಕಿ ಬಂಟ ಸಂಘದ 'ಬಂಟ ಕಲೋತ್ಸವ'
ಮುಲ್ಕಿ, ಎ.14: ಮುಲ್ಕಿಯ ಬಂಟರ ಸಂಘದ ಆಶ್ರಯದಲ್ಲಿ ಸಂಘದ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ನೇತೃತ್ವದಲ್ಲಿ ‘ಬಂಟ ಕಲೋತ್ಸವ-2017’ ಕಾರ್ಯಕ್ರಮವು ಎ.23 ರಂದು ರವಿವಾರ ಬೆಳಗ್ಗೆ ಮುಲ್ಕಿಯ ಬಂಟರ ಸಂಘದ ಸಭಾ ಭವನದಲ್ಲಿ ಜರಗಲಿದೆ.
ಕಾರ್ಯಕ್ರಮವನ್ನು ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಸಿಲಿದ್ದು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ವಹಿಸಲಿದ್ದಾರೆ.
ಈ ವೇಳೆ ಮಂಗಳೂರಿನ ಆಸರೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ ಆಶಾ ಜ್ಯೋತಿ ರೈ ,ಶ್ರೀ ದೇವಿ ಎಜುಕೇಶನ್ ಟ್ರಸ್ಟ್‌ನ ನಿರ್ದೇಶಕಿ ಮ್ಯೆನಾ ಎಸ್. ಶೆಟ್ಟಿ, ಮುಲ್ಕಿಯ ಮಯೂರಿ ಫೌಂಡೇಶನ್‌ನ ಅಧ್ಯಕ್ಷ ಜಯ ಶೆಟ್ಟಿ, ಅಮ್ಮನಡೆಗೆ ನಮ್ಮ ನಡೆಯ ಅಧ್ಯಕ್ಷ ಸಂದೀಪ್ ಶೆಟ್ಟಿ ಮರವೂರು ಮತ್ತು ಟ್ಯೆಮ್ಸ್ ಆಫ್ ಕುಡ್ಲ ಪತ್ರಿಕೆಯ ಪ್ರಧಾನ ಸಂಪಾದಕ ಎಸ್.ಆರ್.ಬಂಡಿಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಂದು ಸಂಜೆ ಜರಗಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ವಹಿಸಲಿದ್ದಾರೆ. ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್‌ನ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ, ಜಾನಪದ ವಿದ್ವಾಂಸ ಡಾ.ವೈ.ಎನ್. ಶೆಟ್ಟಿ, ಮುಂಬಾಯಿಯ ಉದ್ಯಮಿ ಅನಿಲ್ ಶೆಟ್ಟಿ ಕೊಂಜಾಲುಗುತ್ತು, ಪಡುಬಿದ್ರಿ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಅಕ್ಷತಾ ಎಸ್. ಶೆಟ್ಟಿ, ಚಲನಚಿತ್ರ ನಟ ಸಾಹಿಲ್ ರೈ ಮತ್ತು ವಿಜಯಲಕ್ಷ್ಮೀ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.







