Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ...

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಹೆಚ್ಚಿನ ಜವಾಬ್ದಾರಿ: ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ15 April 2017 5:17 PM IST
share
ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಹೆಚ್ಚಿನ ಜವಾಬ್ದಾರಿ: ವೀರಪ್ಪ ಮೊಯ್ಲಿ

ಮಂಗಳೂರು, ಎ.15: ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕರೂ ಆಗಿರುವ ಸಿದ್ದರಾಮಯ್ಯನವರು ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ನಿಭಾಯಿಸಬೇಕಾಗಿದೆ ಎಂದು ಕೇಂದ್ರದ ಮಾಜಿ ಸಚಿ ವೀರಪ್ಪ ಮೊಯ್ಲಿ ಅಭಿಪ್ರಾಯಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದವರು ಹೇಳಿದರು.

ಮುಖ್ಯಮಂತ್ರಿ ಆಯ್ಕೆಯನ್ನು ನಿರ್ದಿಷ್ಟ ಜಾತಿಗೆ ಸೀಮಿತಗೊಳಿಸಿ ಚರ್ಚಿಸುವುದು ಸರಿಯಲ್ಲ ಎಂದು ಹೇಳಿದ ಅವರು, ಪ್ರಗತಿಪರ ಮನೋಭೂಮಿಕೆಯ ಹಾಗೂ ಪಕ್ಷದ ಸಿದ್ಧಾಂತವನ್ನು ಶೇ. 100 ರಷ್ಟು ಅಳವಡಿಸಿರುವ ವ್ಯಕ್ತಿ ಮುಖ್ಯಮಂತ್ರಿಯಾಗುವುದು ಮುಖ್ಯ. ಕಾಂಗ್ರೆಸ್ ಜಾತ್ಯತೀತ ಪಕ್ಷ. ಕಾಂಗ್ರೆಸ್ ಒಡೆಯುವ ಉದ್ದೇಶದಿಂದ ಬಿಜೆಪಿ ದಲಿತ ಮುಖ್ಯಮಂತ್ರಿಯ ಚರ್ಚೆಯನ್ನು ಪ್ರಸ್ತಾಪಿಸಿದೆ ಎಂದು ದಲಿತ ಮುಖ್ಯಮಂತ್ರಿ ಕುರಿತಾದ ಚರ್ಚೆಗೆ ಪ್ರತಿಕ್ರಿಯೆ ನೀಡಿದರು.

ಎಸ್.ಎಂ.ಕೃಷ್ಣ ಪಕ್ಷ ಬಿಟ್ಟಿರುವುದರಿಂದ ಪಕ್ಷಕ್ಕೆ ಹಾನಿಯಾಗಿಲ್ಲ ಎಂದು ಹೇಳಿದ ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

ಕೆಲ ರಾಜ್ಯಗಳಲ್ಲಿ ಚುನಾವಣೆ ಸಂದರ್ಭ ಮತ ಎಣಿಕೆ ಯಂತ್ರದ ಲೋಪದ ಕುರಿತು ಪ್ರತಿಪಕ್ಷಗಳು ಮುಂದಿಟ್ಟಿರುವ ಅನುಮಾನಗಳನ್ನು ಇತ್ಯರ್ಥಪಡಿಸುವಂತೆ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ. ಈ ಕುರಿತು ಸಂಶಯ ನಿವಾರಣೆಗೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

2009 ರಲ್ಲಿ ನಾವು ಮತ ಎಣಿಕೆ ಯಂತ್ರದ ಮೂಲಕ ಚುನಾವಣೆ ನಡೆಸಿದಾಗ ಕೆಲ ರಾಜ್ಯಗಳಿಂದ ಹೊಸ ವ್ಯವಸ್ಥೆ ಬಗ್ಗೆ ದೂರುಗಳು ಬಂದಿತ್ತು. ಆ ಸಂದರ್ಭ ಸರಕಾರ ತಜ್ಞರ ಸಮಿತಿಯೊಂದನ್ನು ನೇಮಿಸಿ ಜನರ ಸಂಶಯ ನಿವಾರಿಸಿತ್ತು ಎಂದವರು ಉಲ್ಲೇಖಿಸಿದರು.

ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ಹಯಾತುಲ್ಲಾ ಕಾಮಿಲ್, ಮುಖಂಡರಾದ ಕೆ. ತೋಜೋಮಯ, ಅಶೋಕ್ ಕುಮಾರ್ ಡಿ.ಕೆ., ಪ್ರಭಾಕರ ಶ್ರೀಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X