ಶಿವಪುರ :20ನೆ ವರ್ಷದ ಗ್ರಾಮೋತ್ಸವ

ಹೆಬ್ರಿ,ಎ.15: ಶಿವಪುರ ಗೆಳೆಯರ ಬಳಗದ ವತಿಯಿಂದ 20ನೆ ವರ್ಷದ ಗ್ರಾಮೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಗ್ರಾಮೋತ್ಸವದಲ್ಲಿ ಹರಿದಾಸ ಕೃಷ್ಣ ನಾಯಕ್ ಮತ್ತು ಗೋವಿಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿ ಐತು ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ಎಪಿಎಂಸಿ ಅಧ್ಯಕ್ಷ ಮುಟ್ಲುಪಾಡಿ ಸತೀಶ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಮೇಶ್ ಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಗಂಧಿ ನಾಯ್ಕ್, ಸದಸ್ಯ ಹುಣ್ಸೆದಡಿ ಸುರೇಶ ಶೆಟ್ಟಿ, ಕಡ್ತಲ ಗ್ರಾಮ ಪಂಚಾಯತ್ ಸದಸ್ಯ ಸತೀಶ ಪೂಜಾರಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಮೃದ್ಧಿ ಪ್ರಕಾಶ ಶೆಟ್ಟಿ, ಅರ್ಚಕ ಸೂರಿಮಣ್ಣು ಸದಾಶಿವ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.
Next Story





