ಮೂಡುಬಿದಿರೆ : ಕಲ್ಲಬೆಟ್ಟು ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಮೂಡುಬಿದಿರೆ,ಎ.15: ಸರಕಾರಿ ಉನ್ನತೀಕರಿಸಿದ ಮಾದರಿ ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೆ ಜಯಂತಿ ಕಾರ್ಯಕ್ರಮ ಶುಕ್ರವಾರ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಅರ್ಪಿಸುವುದರ ಮೂಲಕ ಗೌರವ ಸಲ್ಲಿಸಿದರು. ವಿದ್ಯಾರ್ಥಿ ನಾಯಕಿ ನಿತ್ಯಾಕೃಷ್ಣ ಅಂಬೇಡ್ಕರ್ ಅವರ ಬಾಲ್ಯ ಹಾಗೂ ವಿದ್ಯಾಭ್ಯಾಸದ ಬಗ್ಗೆ ಮಾತನಾಡಿದರು.
ಮುಖ್ಯ ಶಿಕ್ಷಕ ವಿನಯಕುಮಾರ್ ಎಂ. ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ದೂರದೃಷ್ಟಿತ್ವ ಪ್ರಮುಖ ಪಾತ್ರ ವಹಿಸಿದೆ. ಮಹಿಳೆಯರ ಮತ್ತು ದೀನದಲಿತರ ಏಳಿಗೆಗಾಗಿ ಅವರು ಪಟ್ಟಿರುವ ಪರಿಶ್ರಮ ಹಾಗೂ ಅವರ ಜೀವನ ಭಾರತೀಯರಾದ ನಮಗೆಲ್ಲರಿಗೂ ಅನುಕರಣೀಯವಾಗಿದೆ ಎಂದರು.
ಶಾಲಾ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Next Story





