ರೈಲು ಹಳಿಗೆ ತಲೆ ಇಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ,ಎ.15: ಪಿಹೆಚ್‍ಡಿ ವಿದ್ಯಾರ್ಥಿನಿಯೊಬ್ಬರು ರೈಲು ಹಳಿಗೆ ತಲೆ ಇಟ್ಟು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಶನಿವಾರ ಕಲಬುರಗಿಯಲ್ಲಿ ನಡೆದಿದೆ.
ಶ್ರೀದೇವಿ (31) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ರೈಲ್ವೇ ಹಳಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಶ್ರೀದೇವಿ ಗುಲ್ಬರ್ಗಾ ವಿವಿ ಅರ್ಥಶಾಸ್ತ್ರ ವಿಭಾಗದ ಪಿಹೆಚ್‍ಡಿ ವಿದ್ಯಾರ್ಥಿನಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮನೆಯಲ್ಲಿ ಡೆತ್‍ನೋಟ್ ಬರೆದಿಟ್ಟು ಕಾಣೆಯಾಗಿದ್ದು, ಇದೀಗ ಶವವಾಗಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?: ತಿಪ್ಪಣ್ಣ ಎಂಬ ವ್ಯಕ್ತಿ ಶ್ರೀದೇವಿ ಅವರಿಗೆ 5 ವರ್ಷಗಳಿಂದ ಪರಿಚಯವಿದ್ದು,ಈತ ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದಾನೆ. ನನ್ನ ಗೈಡ್ ಕೂಡ ದುಡ್ಡಿಗಾಗಿ ತೊಂದರೆ ಕೊಡುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ತಿಪ್ಪಣ್ಣ ಕಾರಣ ಎಂದು ಡೆತ್‍ನೋಟ್‍ನಲ್ಲಿ ಶ್ರೀದೇವಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





