ಬೈಕ್‌ಗೆ ಲಾರಿ ಡಿಕ್ಕಿ: ಸವಾರ ಮೃತ್ಯು
ತುಮಕೂರು,ಎ.17:ಅತೀ ವೇಗದಿಂದ ಚಲಿಸಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕು ಮತ್ತಿಹಳ್ಳಿ ಗೇಟ್ ಬಳಿ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಸೋಮನಹಳ್ಳಿ ಗ್ರಾಮದ ರಘು(25) ಎಂದು ಗುರುತಿಸಲಾಗಿದ್ದು, ಕಡೂರಿನಿಂದ ಬೆಂಗಳೂರಿಗೆ ದ್ವಿಚಕ್ರವಾಹನದಲ್ಲಿ ಹೋಗುವ ವೇಳೆ ತಿಪಟೂರು ಮತ್ತಿಹಳ್ಳಿ ಗೇಟ್ ಬಳಿ ರಸ್ತೆಯಲ್ಲಿದ್ದ ಗುಂಡಿಯಿಂದ ದ್ವಿಚಕ್ರವಾಹನವನ್ನು ತಪ್ಪಿಸಲು ಹೋಗಿ ಎದುರಿನಿಂದ ಬಂದ ಲಾರಿಗೆ ಬೈಕ್ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ.
ಸ್ಥಳಕ್ಕೆ ವೃತ್ತನಿರೀಕ್ಷಕ ಕೃಷ್ಣರಾಜು, ಪಿಎಸ್ ಐ ಲಕ್ಷ್ಮೀಕಾಂತ ಭೇಟಿ ನೀಡಿ ಪರಿಶೀಲಿಸಿದ್ದು, ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೂಂಡು ತನಿಖೆ ಕೈಗೊಂಡಿದ್ದಾರೆ.
Next Story