ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಆರೋಪಿಗಳ ಅರ್ಜಿ ವಜಾಗೊಳಿಸಿದ ಸಿಬಿಐ ವಿಶೇಷ ಕೋರ್ಟ್
ಬೆಂಗಳೂರು, ಎ.17: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಆರೋಪದಿಂದ ಕೈಬಿಡುವಂತೆ ಆನಂದ್ಸಿಂಗ್, ಸತೀಶ್ ಸೈಲ್, ನಾಗೇಂದ್ರ ಸೇರಿ ಇತರರು ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೂರು ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಆನಂದ್ಸಿಂಗ್, ಸತೀಶ್ ಸೈಲ್, ನಾಗೇಂದ್ರ ಸೇರಿ ಇನ್ನಿತರರು ಈ ಪ್ರಕರಣದ ಆರೋಪದಿಂದ ಕೈಬಿಡುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಈ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು.
Next Story