ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಾನು ಅರ್ಜಿ ಹಾಕಿಲ್ಲ: ಶಿವಕುಮಾರ್

ಬೆಂಗಳೂರು, ಎ. 17: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಾನು ಎಂದೂ ಲಾಭಿ ಮಾಡುವುದಿಲ್ಲ. ಆ ಸ್ಥಾನಕ್ಕೆ ತಾನು ಅರ್ಜಿ ಹಾಕಿಲ್ಲ. ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಹೈಕಮಾಂಡ್ ತೀರ್ಮಾನಕ್ಕೆ ತಾನು ಬದ್ಧ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸದಾಶಿವನಗರದಲ್ಲಿ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಾನು ಕೆಪಿಸಿಸಿ ಅಧ್ಯಕ್ಷನಾಗಲು ಪಕ್ಷದಲ್ಲಿನ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದು, ಪಿತೂರಿ ನಡೆಸುತ್ತಿದ್ದಾರೆ. ಈ ಬಗ್ಗೆ ನನಗೆ ಬೇಸರವಿಲ್ಲ ಎಂದರು.
ಈ ಸಂಬಂಧ ವರಿಷ್ಠರ ಬಳಿಗೂ ತಾನು ಹೋಗುವುದಿಲ್ಲ. ಪಕ್ಷವು ತನಗೆ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ಸಮರ್ಥವಾಗಿ ನಿರ್ವಹಿಸುವೆ ಎಂದರು.
Next Story





