ಪಂಜಿಮೊಗರು: ಹೆಲ್ಮೆಟ್ ಧರಿಸದ್ದಕ್ಕೆ ಪ್ರಶ್ನಿಸಿದ ಎಸಿಪಿಗೆ ಹಲ್ಲೆ; ಆರೋಪಿ ಸೆರೆ

ಮಂಗಳೂರು, ಎ.18: ಹೆಲ್ಮೆಟ್ ಇದ್ದರೂ ಧರಿಸದೆ ಬೈಕ್ ಚಲಾಯಿಸುತ್ತಿದ್ದುದನ್ನು ಪ್ರಶ್ನಿಸಿದ ಎಸಿಪಿಗೆ ಬೈಕ್ ಸವಾರ ಹೆಲ್ಮೆಟ್‌ನಿಂದಲೇ ಹಲ್ಲೆ ನಡೆಸಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸ್ಥಳೀಯ ನಿವಾಸಿ ಕಾರ್ತಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಉತ್ತರ ಎಸಿಪಿ ರಾಜೇಂದ್ರ ಹಲ್ಲೆಗೊಳಗಾದವರು. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರುವಿನಲ್ಲಿ ಈ ಘಟನೆ ನಡೆದಿದೆ.
ಆರೋಪಿ ಕಾರ್ತಿಕ್ ಹೆಲ್ಮೆಟ್ ಇದ್ದರೂ ಧರಿಸದೆ ಬೈಕ್ ಚಲಾಯಿಸುತ್ತಿದ್ದನೆನ್ನಲಾಗಿದೆ. ಇದನ್ನು ಗಮನಿಸಿದ ಎಸಿಪಿ ರಾಜೇಂದ್ರ ಅವರು ಬೈಕ್ ಅನ್ನು ನಿಲ್ಲಿಸಿ ಹೆಲ್ಮೆಟ್ ಧರಿಸದಿರುವುದಕ್ಕೆ ಕಾರ್ತಿಕ್‌ನನ್ನು ತರಾಟೆಗೆತ್ತಿಕೊಂಡರೆನ್ನಲಾಗಿದೆ. ಈ ವೇಳೆ ತನ್ನಲ್ಲಿದ್ದ ಹೆಲ್ಮೆಟ್‌ನಿಂದ ಕಾರ್ತಿಕ್ ಹಲ್ಲೆ ನಡೆಸಿರುದಾಗಿ ಎಸಿಪಿ ರಾಜೇಂದ್ರ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಆರೋಪಿ ಕಾರ್ತಿಕ್‌ನನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





