Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ...

ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ: ದಿಗ್ವಿಜಯ್‌ಸಿಂಗ್

ಕೆಪಿಸಿಸಿ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ

ವಾರ್ತಾಭಾರತಿವಾರ್ತಾಭಾರತಿ18 April 2017 9:21 PM IST
share
ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ: ದಿಗ್ವಿಜಯ್‌ಸಿಂಗ್

ಬೆಂಗಳೂರು, ಎ.18: ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೆ ಎದುರಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೆ ಚುನಾವಣೆಯನ್ನು ಎದುರಿಸಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರೇ ತಮ್ಮ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದರು.

ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ. ಪರಮೇಶ್ವರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಾಯಿಸಿ ಮತ್ತೊಬ್ಬರನ್ನು ಆ ಸ್ಥಾನಕ್ಕೆ ತರುವ ಕುರಿತು ಹೈಕಮಾಂಡ್ ಎದುರು ಯಾವುದೆ ಪ್ರಸ್ತಾಪವಿಲ್ಲ. ಯಾವುದೆ ಸ್ಪರ್ಧೆಯೂ ಇಲ್ಲ. ಸಚಿವ ಸಂಪುಟ ವಿಸ್ತರಣೆ ಹಾಗೂ ವಿಧಾನಪರಿಷತ್‌ಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವುದನ್ನು ಮುಖ್ಯಮಂತ್ರಿಯ ವಿವೇಚನೆಗೆ ಬಿಡಲಾಗಿದೆ ಎಂದು ದಿಗ್ವಿಜಯ್‌ಸಿಂಗ್ ಹೇಳಿದರು.

ವೀರಶೈವ-ಲಿಂಗಾಯತ ಸಮುದಾಯವು ಕಾಂಗ್ರೆಸ್ ಪಕ್ಷದೊಂದಿಗೆ ಇಲ್ಲ ಎಂದು ಕೆಲವರು ಹೇಳುತ್ತಿದ್ದರು. ಆದರೆ ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಅದನ್ನು ಸುಳ್ಳೆಂದು ಸಾಬೀತು ಮಾಡಿದೆ. ವೀರಶೈವ-ಲಿಂಗಾಯತ ಸಮುದಾಯದವರ ಪ್ರಾಬಲ್ಯವಿರುವಂತಹ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಎಂದರೆ ಕೆಲವು ನಿರ್ದಿಷ್ಟ ಜಾತಿಗಳನ್ನು ಓಲೈಸುವ ಪಕ್ಷ ಎಂಬ ಅಪಪ್ರಚಾರಕ್ಕೆ ತಕ್ಕ ಉತ್ತರ ಸಿಕ್ಕಿದೆ. ಇದಕ್ಕಾಗಿ ನಾನು ಮುಖ್ಯಮಂತ್ರಿ, ಸಚಿವರು, ಶಾಸಕರು, ಕಾರ್ಯಕರ್ತರಿಗೆ ಅಭಿನಂದಿಸುತ್ತೇನೆ. ಮತ್ತಷ್ಟು ಪರಿಶ್ರಮ ವಹಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತೇವೆ ಎಂದು ಅವರು ತಿಳಿಸಿದರು.

ನಾವು ಅಹಿಂದ ವರ್ಗಗಳ ಪರವಾಗಿಯಷ್ಟೇ ಅಲ್ಲ, ಎಲ್ಲ ವರ್ಗಗಳ ಪರವಾಗಿದ್ದೇವೆ. ಬಿಜೆಪಿ ಮಾತ್ರ ಬಲಿಷ್ಠರು, ಶೋಷಿತರ ನಡುವೆ ಒಡಕು ಮೂಡಿಸುವ ಯತ್ನ ಮಾಡುತ್ತಿದೆ. ಇದೇ ಕಾರಣಕ್ಕಾಗಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಯಲಿದೆ ಎಂದು ದಿಗ್ವಿಜಯ್‌ಸಿಂಗ್ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭ್ರಷ್ಟಾಚಾರ ರಹಿತ, ಅಭಿವೃದ್ಧಿಪರ ಆಡಳಿತ ನೀಡುತ್ತಿದ್ದೇವೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದು ಅವರು ಕಿಡಿಕಾರಿದರು.

ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯನ್ನು ನಿರ್ವಹಿಸಲು ಸರಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದೇನೆ. ನಾನು ಸಹ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ದಿಗ್ವಿಜಯ್‌ಸಿಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X