Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ವಿದ್ಯಾವಂತರಿಂದಲೇ ಅಸ್ಪಶ್ಯತೆ ಆಚರಣೆ...

​ವಿದ್ಯಾವಂತರಿಂದಲೇ ಅಸ್ಪಶ್ಯತೆ ಆಚರಣೆ ಹೆಚ್ಚಳ: ಡಾ.ರವೀಂದ್ರನಾಥ ಆತಂಕ

ವಾರ್ತಾಭಾರತಿವಾರ್ತಾಭಾರತಿ18 April 2017 9:24 PM IST
share

ಬೆಂಗಳೂರು, ಎ.18: ಆಧುನಿಕ ಯುಗದಲ್ಲಿ ವಿದ್ಯಾವಂತರಲ್ಲಿಯೇ ಅಸ್ಪಶ್ಯತೆ ಆಚರಣೆ ಹೆಚ್ಚಿದ್ದು, ಇದರ ವಿರುದ್ಧ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ರವೀಂದ್ರನಾಥ ತಿಳಿಸಿದ್ದಾರೆ.

ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ 126ನೆ ಜನ್ಮದಿನಾಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ಅಜ್ಞಾನದಿಂದ ಅಸ್ಪಶ್ಯತೆ ಆಚರಣೆ ಮಾಡಲಾಗುತ್ತಿತ್ತು. ಆದರೆ, ಇಂದಿನ ಆಧುನಿಕ ಯುಗದಲ್ಲಿ ಉನ್ನತ ವ್ಯಾಸಂಗ ಮಾಡಿರುವ ವಿದ್ಯಾವಂತರು ಅಸ್ಪಶ್ಯತೆ ಆಚರಣೆ ಮಾಡುತ್ತಿದ್ದಾರೆ. ಆ ಮೂಲಕ ಒಂದು ವರ್ಗವನ್ನು ಎಲ್ಲ ರೀತಿಯ ಅವಕಾಶಗಳಿಂದಲೂ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ದೇವರ ಕಣ್ಣಲ್ಲಿ ಎಲ್ಲ ಮನುಷ್ಯರು ಸಮಾನರು ಎಂದು ಗಾಂಧೀಜಿ ಪ್ರತಿಪಾದಿಸುತ್ತಿದ್ದರು. ಈ ಅಭಿಪ್ರಾಯಕ್ಕೆ ವಿರೋಧ ವ್ಯಕ್ತಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ದೇವರ ಕಣ್ಣಲ್ಲಿ ಸಮಾನರಾಗುವುದಕ್ಕಿಂತ ಮನುಷ್ಯರ ಕಣ್ಣಲ್ಲಿ ಮತ್ತೊಬ್ಬ ಮನುಷ್ಯನಾಗಿ ಕಾಣಬೇಕಾದ ವಾತಾವರಣ ನಿರ್ಮಾಣವಾಗಬೇಕು ಎಂದು ಡಾ.ರವೀಂದ್ರನಾಥ ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಕೇವಲ ದಲಿತರಿಗಾಗಿ ಕೆಲಸ ಮಾಡಿದವರಲ್ಲ, ಎಲ್ಲ ಜಾತಿಯ ಬಡವರಿಗಾಗಿ ಹಾಗೂ ಮಹಿಳೆಯರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಅವರು ಸದನದಲ್ಲಿ ಮಂಡಿಸಿದ ಹಿಂದೂ ಕೋಡ್ ಬಿಲ್‌ನಿಂದಾಗಿ ಮಹಿಳಾ ಸಮುದಾಯ ಅನೇಕ ಸೌಲಭ್ಯಗಳನ್ನು ಪಡೆಯುವಂತಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಿವೃತ್ತ ನ್ಯಾಯಾಧೀಶ ಎಚ್.ಬಿಲ್ಲಪ್ಪ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಅದನ್ನು ಅನುಷ್ಠಾನಕ್ಕೆ ತರುವಂತಹ ಅಧಿಕಾರ ಹೊಂದಿರುವವರು ತೀರ ಭ್ರಷ್ಟರಾಗಿರುವುದರಿಂದ ಸಂವಿಧಾನದ ಆಶಯ ಇಲ್ಲಿಯವರೆಗೂ ಈಡೇರಿಲ್ಲ ಎಂದು ವಿಷಾದಿಸಿದರು.

ದೇಶದ ಭವಿಷ್ಯವನ್ನು ಸುಭದ್ರವಾಗಿ ಕಟ್ಟಲು ಹೊಣೆಹೊತ್ತಿರುವ ಯುವಜನತೆ ಡಾ.ಬಿ.ಆರ್.ಅಂಬೇಡ್ಕರ್‌ರವರ ಬರಹಗಳನ್ನು ಗಂಭೀರವಾಗಿ ಅಧ್ಯಯನ ಮಾಡಬೇಕು. ಹಾಗೂ ಅಸ್ಪೃಶ್ಯತಾ ಆಚರಣೆಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ನೇತ್ರ ತಜ್ಞ ಸುರೇಂದ್ರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X