Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇ 1ರಿಂದ ಕೆಂಪುದೀಪದ ವಿಐಪಿ ಸಂಸ್ಕೃತಿ...

ಮೇ 1ರಿಂದ ಕೆಂಪುದೀಪದ ವಿಐಪಿ ಸಂಸ್ಕೃತಿ ಅಂತ್ಯ:ಗಡ್ಕರಿ

ವಾರ್ತಾಭಾರತಿವಾರ್ತಾಭಾರತಿ19 April 2017 6:54 PM IST
share
ಮೇ 1ರಿಂದ ಕೆಂಪುದೀಪದ ವಿಐಪಿ ಸಂಸ್ಕೃತಿ ಅಂತ್ಯ:ಗಡ್ಕರಿ

ಹೊಸದಿಲ್ಲಿ,ಎ.19: ಬುಧವಾರ ನಡೆದ ಸಂಪುಟ ಸಭೆಯಲ್ಲಿ ದೇಶದಲ್ಲಿ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಮೇ 1ರಿಂದ ಪ್ರಧಾನಿ ವಾಹನವೂ ಸೇರಿದಂತೆ ಎಲ್ಲ ವಾಹನಗಳ ಮೇಲೆ ಕೆಂಪುದೀಪ ಬಳಕೆಯನ್ನು ನಿಷೇಧಿಸಿದೆ. ತುರ್ತುಸೇವೆಯ ವಾಹನಗಳಿಗೆ ಈ ನಿಷೇಧದಿಂದ ವಿನಾಯಿತಿಯನ್ನು ನೀಡಲಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಸುದ್ದಿಸಂಸ್ಥೆಗೆ ಈ ವಿಷಯವನ್ನು ತಿಳಿಸಿದರು.

ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಗಡ್ಕರಿ ಅವರು ತನ್ನ ಅಧಿಕೃತ ವಾಹನದ ಮೇಲಿನ ಕೆಂಪುದೀಪವನ್ನು ತೆಗೆದು ಹಾಕಿದ ಮೊದಲ ಸಚಿವನಾಗಿ ಇತರರಿಗೆ ಮಾದರಿಯಾದರು.

ಈ ಸರಕಾರವು ಸಾಮಾನ್ಯ ಜನರ ಸರಕಾರವಾಗಿದೆ ಮತ್ತು ವಾಹನಗಳ ಮೇಲೆ ದೀಪಗಳು ಹಾಗು ಸೈರನ್‌ನ ವಿಐಪಿ ಸಂಸ್ಕೃತಿಯನ್ನು ನಿರ್ಮೂಲಿಸಲು ನಿರ್ಧರಿಸಿದೆ ಎಂದು ಹೇಳಿದ ಗಡ್ಕರಿ, ವಾಹನದ ಮೇಲೆ ಕೆಂಪುದೀಪ ಅಳವಡಿಕೆ ವಿಐಪಿ ಸಂಸ್ಕ್ರತಿಯ ಸಂಕೇತವಾಗಿದೆ ಮತ್ತು ಪ್ರಜಾಸತ್ತಾತ್ಮಕ ದೇಶದಲ್ಲಿ ಇದಕ್ಕೆ ಅವಕಾಶವಿಲ್ಲ ಎನ್ನುವುದು ಸರಕಾರದ ಸ್ಪಷ್ಟ ಅಭಿಪ್ರಾಯವಾಗಿದೆ. ಅವು ಈಗ ಯಾವುದೇ ಪ್ರಸ್ತುತತೆ ಹೊಂದಿಲ್ಲ ಎಂದರು.

ಆದರೆ ತುರ್ತು ಮತ್ತು ಪರಿಹಾರ ಸೇವೆಗಳಿಗೆ ಸಂಬಂಧಿಸಿದ ವಾಹನಗಳು, ಆ್ಯಂಬುಲನ್ಸ್, ಅಗ್ನಿ ಶಾಮಕ ಯಂತ್ರ ಇತ್ಯಾದಿಗಳು ಕೆಂಪುದೀಪ ಹೊಂದಿರಲು ಅವಕಾಶ ನೀಡಲಾಗುವುದು.

 ಸೈರನ್‌ಗಳ ಮೊಳಗುವಿಕೆ ಮತ್ತು ಕಣ್ಣು ಕೋರೈಸುವ ಕೆಂಪುದೀಪಗಳು ಜನರ ಸಿಟ್ಟಿಗೆ ಕಾರಣವಾಗಿರುವುದರಿಂದ ಇದು ಆರೋಗ್ಯಪೂರ್ಣ ಸಂಸ್ಕೃತಿ ಮತ್ತು ಸಂಪ್ರದಾಯದ ಆರಂಭವಾಗಿದೆ ಎಂದು ಗಡ್ಕರಿ ನುಡಿದರು.

ಹಲವಾರು ರಾಜ್ಯಗಳಲ್ಲಿ ಶಾಸಕರೂ ರಾಜಾರೋಷವಾಗಿ ತಮ್ಮ ವಾಹನಗಳ ಮೇಲೆ ಕೆಂಪುದೀಪಗಳನ್ನು ಅಳವಡಿಸಿಕೊಂಡಿದ್ದಾರೆ ಮತ್ತು ಅವರಲ್ಲಿ ಕೆಲವರು ಕಳಚಬಹುದಾದ ಕೆಂಪುದೀಪಗಳನ್ನು ಬಳಸುತ್ತಿದ್ದಾರೆ. ಸೈರನ್‌ಗಳನ್ನು ಪೈಲಟ್ ಪೊಲೀಸ್ ವಾಹನಗಳು ಮಾತ್ರ ಬಳಸಬಹುದಾಗಿದ್ದರಿಂದ ಸಚಿವರು ಸೈರನ್‌ಗಳನ್ನು ಬಳಸುವುದೂ ಕಾನೂನು ಬದ್ಧವಲ್ಲ ಎಂದು ಅವರು, ಕೆಂಪುದೀಪಕ್ಕೆ ಅಂತ್ಯ ಹಾಡುವ ಈ ಕ್ರಮವು ಮೋದಿ ಸರಕಾರದಲ್ಲಿ ಜನರ ವಿಶ್ವಾಸ ಮತ್ತು ಗೌರವವನ್ನು ಹೆಚ್ಚಿಸಲಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಿಷೇಧವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಿನಂತೆ ಕ್ರಮ ಜರುಗಿಸಲಾಗುವುದು ಎಂದರು.

ಈ ಸಂಬಂಧ ವಿವರವಾದ ಅಧಿಸೂಚನೆಯನ್ನು ಶೀಘ್ರವೇ ಹೊರಡಿಸಲಾಗುವುದು ಮತ್ತು ಮೋಟಾರು ವಾಹನಗಳ ಕಾಯ್ದೆಗೆ ಯಾವುದೇ ತಿದ್ದುಪಡಿಯ ಅಗತ್ಯವಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X