Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಖುರೈಶಿ ಪ್ರಕರಣ ಸಿಐಡಿ ತನಿಖೆಗೆ...

​ಖುರೈಶಿ ಪ್ರಕರಣ ಸಿಐಡಿ ತನಿಖೆಗೆ ಸ್ವಾಗತಾರ್ಹ: ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ

ವಾರ್ತಾಭಾರತಿವಾರ್ತಾಭಾರತಿ19 April 2017 7:40 PM IST
share

ಮಂಗಳೂರು, ಎ.19: ಖುರೈಶಿ ಪ್ರಕರಣವನ್ನು ರಾಜ್ಯ ಸರಕಾರವು ಸಿಐಡಿ ತನಿಖೆಗೆ ಒಳಪಡಿಸಿರುವುದನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಸ್ವಾಗತಿಸಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಸಂಯೋಜಕ ನೂರುದ್ದೀನ್ ಸಾಲ್ಮರ , ಈ ಮೂಲಕ ಸತ್ಯಾಂಶ ಹೊರಬಂದು ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಖುರೈಶಿ ಪ್ರಕರಣವನ್ನು ತನಿಖೆಗೊಳಪಡಿಸುವಂತೆ ಒತ್ತಾಯಿಸಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವ, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಒಳಪಡಿಸಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ, ಶಾಸಕರ ಬಗ್ಗೆ ಆರೋಪಗಳನ್ನು ಹೊರಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿರುವುದು ಸರಿಯಲ್ಲ ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರಿನಲ್ಲಿ ಅಬ್ದುಲ್ ಕಲಾಂ ಆಝಾದ್ ಭವನಕ್ಕೆ 20 ಕೋಟಿ ರೂ. ಅನುದಾನ, 200 ಮೌಲಾನ ಆಝಾದ್ ಉರ್ದು ಶಾಲೆಗಳ ಆರಂಭ, ಮಹಾನಗರ ಪಾಲಿಕೆಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ 2 ಕೋ. ರೂ. ವೆಚ್ಚದಲ್ಲಿ ವಸತಿ ನಿಲಯ, ಜಿಲ್ಲಾ ಕೇಂದ್ರಗಳಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ 2 ಕೋಟಿ ರೂ., ಗ್ರಾಮೀಣ ಪ್ರದೇಶಗಳ ಶಾದಿ ಮಹಲ್ ನಿರ್ಮಾಣಕ್ಕೆ 1 ಕೋ. ರೂ., ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ, ಮೈಸೂರಿನಲ್ಲಿ ಮುಸ್ಲಿಂ ಬಾಲಕ, ಬಾಲಕಿಯರ ಅನಾಥಾಶ್ರಮಕ್ಕೆ ಶೈಕ್ಷಣಿಕ ಹಾಗೂ ಮೂಲಭೂತ ಸೌಲಭ್ಯಕ್ಕೆ 2 ಕೋ. ರೂ., ಶೇಖ್ ಇಮಾಮ್ ಗೌರವ ಧನ 3ರಿಂದ 4 ಸಾವಿರಕ್ಕೆ ಏರಿಕೆ, ಮುಅಝ್ಝಿನ್ ಗೌರವಧನ 2 ಸಾವಿರದಿಂದ 3 ಸಾವಿರ ರೂ.ಗೆ ಏರಿಕೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 330 ಕೋಟಿ ರೂ. ಜೊತೆಗೆ ಹೊಸ ಯೋಜನೆಗಳು, ಮನೆ ಮಳಿಗೆ ಯೋಜನೆಯಡಿ ಅಲ್ಪಸಂಖ್ಯಾತ ವಿಶೇಷ ದುರ್ಬಲ ವರ್ಗದವರಿಗೆ 5 ಲಕ್ಷ ರೂ., ಅದರಲ್ಲಿ ಶೇ. 50 ಸಹಾಯಧನ ಮತ್ತು ಶೇ. 50 ಸಾಲ ಯೋಜನೆ, 500 ಮಂದಿಗೆ ಟ್ಯಾಕ್ಸಿ ಖರೀದಿ ಯೋಜನೆಯಲ್ಲಿ 3 ಲಕ್ಷ ರೂ. ಸಹಾಯಧನ ಉಳಿದದ್ದು ಬ್ಯಾಂಕ್ ಸಾಲ ಮೊದಲಾದ ಯೋಜನೆಗಳಿಗೆ ಅನುದಾನ ನೀಡಲಾಗಿದೆ. ಅನುದಾನ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇದಕ್ಕೆ ಶ್ರಮಿಸಿದ ಸಚಿವರಾದ ಬಿ.ರಮಾನಾಥ ರೈ ಮತ್ತು ಯು.ಟಿ.ಖಾದರ್ ಅವರನ್ನು ಅಭಿನಂದಿಸುವುದಾಗಿ ನೂರುದ್ದೀನ್ ಸಾಲ್ಮರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಎನ್.ಎಸ್.ಕರೀಂ, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಸದಸ್ಯ ಬಶೀರ್ ಜೋಕಟ್ಟೆ, ಯುವ ಕಾಂಗ್ರೆಸ್ ಮುಖಂಡ ಫಯಾಝ್ ಬಿ.ಕೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X