ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಪುತ್ತೂರು, ಎ.19: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ಎಂಬಲ್ಲಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
ದಾರಂದಕುಕ್ಕು ನಿವಾಸಿ ದಿ. ಪರಮೇಶ್ವರ ಎಂಬವರ ಪತ್ನಿ ಬೇಬಿ(62) ಮೃತಪಟ್ಟ ಮಹಿಳೆ. ಎ.15ರಂದು ಸೀಮೆ ಎಣ್ಣೆ ಮೈಗೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ
ಸರಕಾರದ ವಸತಿ ಯೋಜನೆಯ ಅಡಿಯಲ್ಲಿ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದ ಬೇಬಿ ಈ ಮೊತ್ತದಲ್ಲಿ ಮನೆ ಕೆಲಸ ಆರಂಭಿಸಿದ್ದರೂ, ಆರ್ಥಿಕ ಅಡಚಣೆಗೆ ತುತ್ತಾಗಿದ್ದರು ಎನ್ನಲಾಗಿದೆ. ಈ ನಡುವೆ ಆರೋಗ್ಯ ಸಮಸ್ಯೆಯೂ ಕಾಡುತ್ತಿದ್ದು, ಇವೆಲ್ಲದರಿಂದ ನೊಂದು ಅವರು ಆತ್ಮಹತ್ಯೆಗೆ ಮುಂದಾಗಿದ್ದರು ಎಂದು ಶಂಕಿಸಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





