Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಗಿಲ್ ಕಾರ್ಯಾಚರಣೆಯ ಕೀರ್ತಿ ಯೋಧರಿಗೆ...

ಕಾರ್ಗಿಲ್ ಕಾರ್ಯಾಚರಣೆಯ ಕೀರ್ತಿ ಯೋಧರಿಗೆ ಸಲ್ಲಬೇಕು: ನಿವೃತ್ತ ಜನರಲ್ ವೇದಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ19 April 2017 10:45 PM IST
share
ಕಾರ್ಗಿಲ್ ಕಾರ್ಯಾಚರಣೆಯ ಕೀರ್ತಿ ಯೋಧರಿಗೆ ಸಲ್ಲಬೇಕು: ನಿವೃತ್ತ ಜನರಲ್ ವೇದಪ್ರಕಾಶ್

ಮಂಗಳೂರು, ಎ.19: ಕಾರ್ಗಿಲ್ ಕಾರ್ಯಾಚರಣೆಯ ಜಯ ಹಾಗೂ ಸರ್ಜಿಕಲ್ ಸ್ಟ್ರೈಕ್‌ನ ಯಶಸ್ವಿ ಕಾರ್ಯಾಚರಣೆಯ ಕೀರ್ತಿ ಸೇನೆಯ ತಳ ಮಟ್ಟದಲ್ಲಿದ್ದು, ಪ್ರತಿಕೂಲ ಪರಿಸರದಲ್ಲಿ ಪ್ರಾಣದ ಹಂಗು ತೊರೆದು ಹೋರಾಡಿದ ಯೋಧರಿಗೆ ಸಲ್ಲಬೇಕು. ಇದರಲ್ಲಿ ರಾಜಕೀಯ ಸಲ್ಲದು ಎಂದು 1999ರಲ್ಲಿ ಕಾರ್ಗಿಲ್ ಆಪರೇಶನ್ ವಿಜಯದ ನೇತೃತ್ವ ವಹಿಸಿದ್ದ ಜನರಲ್ ವೇದಪ್ರಕಾಶ್ ಮಲಿಕ್ ತಿಳಿಸಿದ್ದಾರೆ

ನಗರದ ಪುರಭವನದಲ್ಲಿಂದು ಜಿಲ್ಲಾ ಮಾಜಿ ಸೈನಿಕರ ಸಂಘ, ಶಾಸ್ತವು ಭೂತನಾಥೇಶ್ವರ ಟ್ರಸ್ಟ್, ಲಯನ್ಸ್ ಜಿಲ್ಲೆ ಮಂಗಳೂರು ಇದರ ವತಿಯಿಂದ ಹಮ್ಮಿಕೊಂಡ ಕಾರ್ಗಿಲ್ 1999ರ "ಆಪರೇಶನ್ ವಿಜಯ್ ಕಾರ್ಯಾಚರಣೆ"ಯ ಬಗ್ಗೆ ಸಾರ್ವಜನಿಕರೊಂದಿಗೆ ಸಂವಾದ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ರಾಷ್ಟ್ರದ ಸುರಕ್ಷತೆ ಎನ್ನುವುದು ಎಲ್ಲಾ ಕಾಲದಲ್ಲೂ ಸ್ಥಿರವಾಗಿರುವ ಸಂಗತಿಯಲ್ಲ ಎನ್ನುವುದು ಕಾರ್ಗಿಲ್ ಯುದ್ಧದಿಂದ ನಾವು ಕಲಿಯಬೇಕಾದ ಪಾಠವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಲಾಹೋರ್ ಒಪ್ಪಂದವಾದ ಬಳಿಕ ನಾಲ್ಕೇ ತಿಂಗಳಲ್ಲಿ ಪಾಕಿಸ್ತಾನ ಭಾರತದ ಗಡಿಯಲ್ಲಿ ಆಕ್ರಮಣ ನಡೆಸಿದೆ. ಪ್ರಸಕ್ತ ಕಾಶ್ಮೀರದ ಪರಿಸ್ಥಿತಿಯೂ ಶಾಂತಿಯುತವಾಗಿಲ್ಲ. ಯಾವುದೇ ಸಂದರ್ಭದಲ್ಲಿ ದೇಶದ ರಕ್ಷಣೆಗೆ ಅಪಾಯ ಉಂಟಾಗುವ ವಾತಾವರಣ ನಿರ್ಮಾಣವಾಗಬಹುದು. ಈ ನಿಟ್ಟಿನಲ್ಲಿ ಭಾರತ ಸದಾ ಸನ್ನದ್ಧ ಸ್ಥಿತಿಯಲ್ಲಿ ಇರಬೇಕಾಗಿದೆ. ಕಾರ್ಗಿಲ್ ಸಂದರ್ಭದಲ್ಲೂ ಭಾರತದ ಸೇನೆ ಪಾಕಿಸ್ತಾನಿ ಸೇನೆಯನ್ನು ಹಿಮ್ಮೆಟ್ಟಿಸುವ ಸನ್ನದ್ಧ ಸ್ಥಿತಿಯಲ್ಲಿದ್ದ ಕಾರಣ ಕಾರ್ಗಿಲ್ ಕಾರ್ಯಾಚರಣೆ ಯಲ್ಲಿ ಜಯ ಗಳಿಸಲು ಸಾಧ್ಯವಾಯಿತು. ಆದರೆ ಈ ಸಂದರ್ಭದಲ್ಲಿ ದೇಶದೊಳಗಿನ ಕೆಲವು ಉಗ್ರ ಸಂಘಟನೆಗಳು ಸೇನೆಯ ವಿರುದ್ಧ ಹೋರಾಟದಲ್ಲಿ ತೊಡಗಿರುವುದು ಆರಂಭದಲ್ಲಿ ಗೊತ್ತಾಗಲಿಲ್ಲ. ಬಳಿಕ ಪಾಕಿಸ್ತಾನಿ ಸೈನಿಕರು ದೇಶದ ಗಡಿಯೊಳಗೆ ನುಗ್ಗಿರುವುದು ಸ್ಪಷ್ಟವಾಯಿತು. ಈ ಕಾರಣದಿಂದ ಕಾರ್ಯಾಚರಣೆ ಸ್ವಲ್ಪ ವಿಳಂಬವಾಯಿತು ಎಂದು ವೇದಪ್ರಕಾಶ್ ತಿಳಿಸಿದರು.

"ನಾವು ಯುದ್ಧದ ಸಂದರ್ಭದಲ್ಲಿ ಸೈನಿಕರ ಮನೋಸ್ಥೈರ್ಯ ಕುಸಿಯದಂತೆ ಅವರನ್ನು ಪ್ರೋತ್ಸಾಹಿಸುತ್ತಿದ್ದೆವು. ಜೀವದ ಹಂಗು ತೊರೆದು ಯುವ ಯೋಧರು ಈ ಜಯವನ್ನು ತಂದು ಕೊಟ್ಟಿದ್ದಾರೆ. ಕೆಲವರು ತಮ್ಮ ಪ್ರಾಣವನ್ನು ಕಳೆದುಕೊಂಡರು. ಸೆರೆ ಸಿಕ್ಕ ಭಾರತದ ಕೈದಿಗಳ ಮೇಲೆ ಪಾಕ್ ಸೇನೆ ಬರ್ಬರ ದೌರ್ಜನ್ಯ ನಡೆಸಿತು. ಈ ಬಗ್ಗೆ ಭಾರತ ಸರಕಾರಕ್ಕೆ ನಾನು ದೂರು ನೀಡಿದ್ದೇನೆ" ಎಂದು ವೇದ ಪ್ರಕಾಶ್ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಸರ್ಜಿಕಲ್ ಸ್ಟ್ಟ್ರೆಕ್‌ನ ಬಗ್ಗೆ ಉತ್ತರಿಸಿದ ಅವರು, ಅದರ ಅಗತ್ಯವಿತ್ತು ಸೈನಿಕರು ಅದನ್ನು ದೇಶದ ರಕ್ಷಣೆಯ ದೃಷ್ಟಿಯಿಂದ ಸಮರ್ಥವಾಗಿ ನಿಭಾಯಿಸಿದ್ದಾರೆ. ಮುಂದೆಯೂ ಅಗತ್ಯ ಕಂಡರೆ ನಡೆಸಬೇಕಾದೀತು. ಇದರಲ್ಲಿ ಪಕ್ಷ ರಾಜಕಾರಣ ಸಲ್ಲದು ಎಂದು ಹೇಳಿದರು.

ಜಿಲ್ಲಾ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ವಿಕ್ರಂ ದತ್ತ ಅಧ್ಯಕ್ಷತೆ ವಹಿಸಿದ್ದರು. ಕರ್ನಲ್ ಶರತ್ ಭಂಡಾರಿ ಸ್ವಾಗತಿಸಿದರು. ಬ್ರಿಗೇಡಿಯರ್ ಐ.ಎನ್.ರೈ ಅತಿಥಿಗಳನ್ನು ಪರಿಚಯಿಸಿದರು.

ಜಿಲ್ಲಾಧಿಕಾರಿ ಡಾ.ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ, ಶಾಸ್ತಾವು ಭೂತನಾಥೇಶ್ವರಿ ಟ್ರಸ್ಟ್ ನ ಆಡಳಿತ ಟ್ರಸ್ಟಿ ವಿಜಯನಾಥ ವಿಠಲ ಶೆಟ್ಟಿ, ಲಯನ್ಸ್ ಮುಖಂಡ ಅರುಣ್ ಶೆಟ್ಟಿ, ಕರ್ನಲ್ ಬಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X