ಕೆಪಿಎಸ್‌ಸಿ ಅಕ್ರಮ: ಗೋನಾಳ್ ಭೀಮಪ್ಪ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು, ಎ.19: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ವಿರುದ್ಧ ದಾಖಲಾಗಿರುವ ಕೆಎಎಸ್ ಅಕ್ರಮ ಪ್ರಕರಣದ ಎಲ್ಲ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಚಾರ್ಜ್‌ಶೀಟ್ ರದ್ದುಕೋರಿ ಗೋನಾಳ್ ಭೀಮಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ್ ಭೈರಾರೆಡ್ಡಿ ಅವರಿದ್ದ ಪೀಠ ಈ ಆದೇಶ ನೀಡಿತು. ಕೆಎಎಸ್ ಹುದ್ದೆಗಳ ನೇಮಕಾತಿಯಲ್ಲಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ಅವರು ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಅಮರನಾಥ್ ಎಂಬವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವೇನು: ಗೋನಾಳ್ ಭೀಮಪ್ಪ ಅಧ್ಯಕ್ಷತೆಯ ಕೆಪಿಎಸ್‌ಸಿಯು 2011ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕದಲ್ಲಿ ಭಾರೀ ಅವ್ಯವಹಾರ ನಡೆಸಿದೆ ಎಂದು 2014ರ ಆ.7ರಂದು ಕೆಪಿಎಸ್‌ಸಿಯ ಆಯ್ಕೆ ಪಟ್ಟಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿತ್ತು.
Next Story





