ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ಬೆಂಕಿಗಾಹುತಿ

ನೆಲ್ಯಾಡಿ, ಎ.20: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿನ ಸಣ್ಣಂಪಾಡಿಯಲ್ಲಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಬೆಂಕಿಗಾಹುತಿಯಾದ ಘಟನೆ ಗುರುವಾರ ನಡೆದಿದೆ.
ಲಾರಿ ಢಿಕ್ಕಿ ಹೊಡೆದುದ್ದರಿಂದ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆ ಬಿದ್ದಿದ್ದು, ಪರಿಣಾಮ ಲಾರಿಗೆ ಬೆಂಕಿ ಹತ್ತಿಕೊಂಡಿತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.
Next Story





