ಮಗಳ ಮದುವೆ ಕಾರ್ಯಕ್ರಮದಲ್ಲಿ ಕೊನೆಯುಸಿರೆಳೆದ ತಾಯಿ

ಉಪ್ಪಿನಂಗಡಿ, ಎ.20: ಮಗಳ ಮದುವೆ ನಡೆಯುತ್ತಿದ್ದ ಸಂದರ್ಭ ಮಂಟಪದಲ್ಲಿದ್ದ ತಾಯಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪರ ಹಾಗೂ ವಾರಿಜಾ (50) ದಂಪತಿಯ ಪುತ್ರಿಯ ವಿವಾಹ ಉಪ್ಪಿನಂಗಡಿಯ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿತ್ತು. ಕಾರ್ಯಕ್ರಮದ ನಡುವೆಯೇ ವಾರಿಜಾ ಅವರು ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿದ್ದಾರೆ. ಸಂಭ್ರಮದ ಕಾರ್ಯಕ್ರಮದಲ್ಲಿ ವಧುವಿನ ತಾಯಿಯೇ ಮೃತಪಟ್ಟಿರುವುದರಿಂದ ಮದುವೆ ಮಂಟಪದಲ್ಲಿ ಸೂತಕದ ಛಾಯೆ ಆವರಿಸಿದೆ.
Next Story





