ದಿಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬರ್ಕಾಶುಕ್ಲಾ ಸಿಂಗ್ ರಾಜೀನಾಮೆ

ಹೊಸದಿಲ್ಲಿ, ಎ. 20: ದಿಲ್ಲಿಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬರ್ಕಾಶುಕ್ಲಾ ಸಿಂಗ್ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆದರೆ,ತಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬರ್ಕಾ ತನ್ನ ರಾಜಿನಾಮೆಗೆ , ಅಜಯ್ ಮಾಕನ್ ಅಪಮಾನಿಸಿದ್ದು ಕಾರಣ ಎಂದು ಹೇಳಿದ್ದಾರೆ. ಅವರು ಕೆಟ್ಟ ಶಬ್ದಗಳನ್ನು ಬಳಸಿ ಮಾತಾಡಿದರೂ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ ಎಂದು ಬರ್ಕಾ ಶುಕ್ಲಾ ಸಿಂಗ್ ಅರೋಪಿಸಿದ್ದಾರೆ.
ದಿಲ್ಲಿ ಎಮ್‌ಸಿಡಿ ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಲಾಗಿಲ್ಲ. ಈ ಕುರಿತು ರಾಹುಲ್ ಗಾಂಧಿಯವರಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಬರ್ಕಾ ಹೇಳಿದರು. ಹಲವಾರು ಪ್ರಮುಖ ನಾಯಕರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ಇತ್ತೀಚೆಗೆ ದಿಲ್ಲಿಯ ಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಕೂಡಾ ಕಾಂಗ್ರೆಸ್ ಪಕ್ಷ ತೊರೆದಿದ್ದರು. ಅವರು ಕೂಡಾ ಅಜಯ್ ಮಾಕನ್ ವಿರುದ್ಧ ಆರೋಪ ಹೊರಿಸಿದ್ದರು.
Next Story





