Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಂಧಿ ದಲಿತ ವಿರೋಧಿಯಲ್ಲ: ದಿನೇಶ್ ಅಮೀನ್...

ಗಾಂಧಿ ದಲಿತ ವಿರೋಧಿಯಲ್ಲ: ದಿನೇಶ್ ಅಮೀನ್ ಮಟ್ಟು

​ಬುದ್ಧ, ಬಸವ, ಗಾಂಧಿ ಮತ್ತು ಅಂಬೇಡ್ಕರ್ ರಾಷ್ಟ್ರೀಯ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ20 April 2017 7:44 PM IST
share
ಗಾಂಧಿ ದಲಿತ ವಿರೋಧಿಯಲ್ಲ: ದಿನೇಶ್ ಅಮೀನ್ ಮಟ್ಟು

ಅಸ್ಪೃಶ್ಯತೆ ನಿವಾರಣೆ ಮತ್ತು ಹಿಂದೂ-ಮುಸ್ಲಿಂ ಐಕ್ಯತೆಯನ್ನು ಗಾಂಧಿ ಮತ್ತು ಅಂಬೇಡ್ಕರ್ ಬಯಸಿದ್ದರು

ಬೆಂಗಳೂರು, ಎ.20: ಬಹುಮುಖ ಆಯಾಮಗಳನ್ನು ಹೊಂದಿದ್ದ ಗಾಂಧಿಯನ್ನು ದಲಿತರು ಸೇರಿದಂತೆ ಎಲ್ಲ ಸಮುದಾಯದವರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ. ಅವರನ್ನು ದಲಿತವಿರೋಧಿ ಎಂದು ಕಾಣುತ್ತಾರೆ. ಆದರೆ ಗಾಂಧಿ ಮತ್ತು ಅಂಬೇಡ್ಕರ್ ಇಬ್ಬರನ್ನೂ ಅವರ ಭಿನ್ನಾಭಿಪ್ರಾಯಗಳ ಮೂಲಕ ಅರಿಯುವ ಬದಲು ಸಹಮತ ಹೊಂದಿದ್ದ ವಿಚಾರಗಳ ಮೂಲಕ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್‌ಮಟ್ಟ ಅಭಿಪ್ರಾಯಿಸಿದ್ದಾರೆ.

ಗುರುವಾರ ನಗರದ ಗಾಂಧಿ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ‘ಆರೋಗ್ಯಕರ ಸಮಾಜಕ್ಕೆ ಬುದ್ಧ, ಬಸವ, ಗಾಂಧಿ ಮತ್ತು ಅಂಬೇಡ್ಕರ್ ವಿಚಾರಗಳ ಕೊಡುಗೆ’ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಹಿಂದೂ ಸಮಾಜದಲ್ಲಿನ ಅಸ್ಪಶ್ಯತೆ ಮತ್ತು ಅಸಮಾನತೆಯನ್ನು ಗಾಂಧೀಜಿ ತೀಕ್ಷ್ಣವಾಗಿ ವಿರೋಧಿಸುತ್ತಿದ್ದರು. ಪುನರ್ಜನ್ಮವೇನಾದರೂ ಇದ್ದರೆ ದಲಿತನಾಗಿ ಹುಟ್ಟಬೇಕೆಂಬ ಆಸೆ ಇದೆ ಎಂದು ಹೇಳಿದ್ದ ಗಾಂಧೀಜಿಯನ್ನು ದೇಶವಿಭಜಕ, ದಲಿತ ವಿರೋಧಿ ಎನ್ನುವಂತೆ ಬಿಂಬಿಸುವುದು ಸರಿಯಲ್ಲ ಎಂದ ಅವರು, ನಮ್ಮಲ್ಲಿ ಹೆಚ್ಚಿನ ದಲಿತರು ಗಾಂಧೀಜಿಯವರ ಬಗ್ಗೆ ಪೂರ್ವಗ್ರಹ ಹೊಂದಿದ್ದಾರೆ ಎಂದರು.

ಭಾರತದಲ್ಲಿ ಅಂಬೇಡ್ಕರ್‌ರನ್ನು ದಲಿತರಿಗೆ, ಬಸವಣ್ಣರನ್ನು ಲಿಂಗಾಯಿತರಿಗೆ ಹೀಗೆ ನಮ್ಮಲ್ಲಿನ ನಾಯಕರನ್ನು ಒಂದೊಂದು ಜನಾಂಗ ಅಥವಾ ಸಮುದಾಯದ ನಾಯಕರಂತೆ ಸೀಮಿತಗೊಳಿಸಲಾಗಿದೆ. ಹೀಗಾಗಿ ಅವರನ್ನೆಲ್ಲ ಪ್ರಶ್ನಿಸುವುದಾಗಲಿ, ಟೀಕಿಸುವುದಾಗಲಿ ಕಷ್ಟವಾಗಿದೆ. ಆದರೆ, ಯಾರ ಹಿಡಿತಕ್ಕೂ ಸಿಗದ ಗಾಂಧಿ ಬಗ್ಗೆ ಎಂಥದೇ ಟೀಕೆ ಮಾಡಿದರೂ ಯಾರೂ ಬೀದಿಗಿಳಿಯುವುದಿಲ್ಲ. ಇದು ಗಾಂಧೀಜಿಯ ಶಕ್ತಿಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಬುದ್ಧ, ಬಸವ, ಗಾಂಧಿ ಮತ್ತು ಅಂಬೇಡ್ಕರ್ ಎಲ್ಲರೂ ನಿಜವಾದ ಪ್ರಜಾಪ್ರಭುತ್ವವಾದಿಗಳು. ಕೇವಲ ಒಬ್ಬರನ್ನು ಮಾತ್ರ ಅಧ್ಯಯನ ಮಾಡಿ ಎಲ್ಲರನ್ನು ವಿರೋಧಿಸುವುದು ಸರಿಯಲ್ಲ. ಎಲ್ಲರನ್ನೂ ಅಧ್ಯಯನ ಮಾಡಬೇಕು. ಆಗ ಮಾತ್ರ ದೇಶದ ಸಂಕೀರ್ಣತೆ ಅರ್ಥವಾಗುತ್ತದೆ. ಅಸ್ಪೃಶ್ಯತೆಯ ನಿವಾರಣೆ ಮತ್ತು ಹಿಂದೂ-ಮುಸ್ಲಿಂ ಐಕ್ಯತೆಯನ್ನು ಗಾಂಧಿ ಮತ್ತು ಅಂಬೇಡ್ಕರ್ ಇಬ್ಬರೂ ಬಯಸಿದ್ದರು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಮಾವಳ್ಳಿ ಶಂಕರ್, ಇಂದಿಗೂ ದೇಶದ ಒಂದು ಬೀದಿಗೆ ಅಂಬೇಡ್ಕರ್ ಹೆಸರನ್ನು ಇಡುವುದು ಸುಲಭವಾಗಿಲ್ಲ. ದಲಿತ ವರ್ಗದ ಕೆಲಸಗಳೆಲ್ಲವೂ ಹೋರಾಟದ ಮೂಲಕವೇ ಆಗಬೇಕಾಗಿದೆ. ಮಾನವೀಯ ನೆಲೆಯ ಮೇಲೆ ಭಾರತವನ್ನು ಕಟ್ಟಬೇಕೆನ್ನುವ ಅವರ ಕನಸನ್ನು ನಾವೆಲ್ಲರೂ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಗಾಂಧಿ ಭವನದ ಅಧ್ಯಕ್ಷ ವೂಡೆ ಕೃಷ್ಣ, ದಲಿತ ಮುಖಂಡರಾದ ರುದ್ರಪ್ಪ ಹನಗವಾಡಿ, ಇಂದಿರಾ ಕೃಷ್ಣಪ್ಪ, ಮಂಗ್ಳೂರ ವಿಜಯ, ಪ್ರೊ.ಶಿವರಾಜು ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X